28.8 C
Bengaluru
Saturday, February 28, 2026

ಬೈಕ್ ಗೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

Chintamani : ಚಿಂತಾಮಣಿ-ಶಿಡ್ಲಘಟ್ಟ ರಸ್ತೆಯ ತಿಮ್ಮಸಂದ್ರದ ಭಾರತೀಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ಭೀಕರ ಅಪಘಾತ (Accident) ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ (Two Wheeler) ಕಾರು (Car) ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತರನ್ನು ತಾಲೂಕಿನ ಚಿನ್ನಗುಟ್ಟಪಲ್ಲಿ ಗ್ರಾಮದ ಲಾರಿ ಮಾಲೀಕ ವೆಂಕಟರೆಡ್ಡಿ (42) ಎಂದು ಗುರುತಿಸಲಾಗಿದೆ. ಚಿಂತಾಮಣಿ ಕಡೆಯಿಂದ ಶಿಡ್ಲಘಟ್ಟ ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನ ಹಾಗೂ ಶಿಡ್ಲಘಟ್ಟ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ತೀವ್ರ ಗಾಯಗೊಂಡ ವೆಂಕಟರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ.

ಕಾರು ಚಾಲಕ ನಗರದ ಆದಿನಾರಾಯಣ ಎಂಬಾತ ಕುಡಿದ ಮತ್ತಿನಲ್ಲಿ ಅತಿವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಗ್ರಾಮಾಂತರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರು ಚಾಲಕನನ್ನು ಬಂಧಿಸಿದ್ದಾರೆ.

ಮೃತರ ಪತ್ನಿ ಭಾಗ್ಯಮ್ಮ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!