- Advertisement -
- Advertisement -
- Advertisement -
- Advertisement -
Chintamani : ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ದ್ವಿಚಕ್ರವಾಹನದ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಚಿಂತಾಮಣಿ ನಗರದ ಹೊರವಲಯದ ತಿಮ್ಮಸಂದ್ರದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿಡ್ಲಘಟ್ಟ ತಾಲ್ಲೂಕಿನ ಕದಿರಿನಾಯಕನಹಳ್ಳಿಯ 25 ವರ್ಷದ ಅನಿಲ್(ಆಕಾಶ್) ಎಂದು ಗುರುತಿಸಲಾಗಿದೆ. ಭಾನುವಾರ ತಡರಾತ್ರಿ ಕೆಲಸ ಮುಗಿಸಿ ದ್ವಿಚಕ್ರವಾಹನದಲ್ಲಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿ ಹೊಡೆದ ಅಪರಿಚಿತ ವಾಹನ ಸ್ಥಳದಲ್ಲಿ ನಿಲ್ಲಿಸದೆ ಪರಾರಿಯಾಗಿದ್ದು, ರಸ್ತೆಯಲ್ಲಿ ಮೃತನ ದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur
- Advertisement -