ವಿಕಸಿತ ಭಾರತ ಸಂಕಲ್ಪ ರಥಯಾತ್ರೆ

- Advertisement -
- Advertisement -

Chintamani : ಚಿಂತಾಮಣಿ ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿ ಗುರುವಾರ ವಿಕಸಿತ ಭಾರತ ಸಂಕಲ್ಪ ರಥಯಾತ್ರೆ (Viksit Bharat Sankalp Yatra) ಕಾರ್ಯಕ್ರಮಕ್ಕೆ ಸಂಸದ ಎಸ್.ಮುನಿಸ್ವಾಮಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಎಸ್.ಮುನಿಸ್ವಾಮಿ “ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು ಯೋಜನೆಗಳ ಕುರಿತು ಬಹಳಷ್ಟು ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ಕೇಂದ್ರ ಸರ್ಕಾರದ ಮುದ್ರಾ ಯೋಜನೆ, ಜನಧನ್ ಯೋಜನೆ, ಪಿ.ಎಂ.ವಿಶ್ವಕರ್ಮ, ಉಜ್ವಲ್, ಕೃಷಿ ಸಮ್ಮಾನ್, ಅನ್ನಭಾಗ್ಯ ಮತ್ತಿತರ ಅನೇಕ ಯೋಜನೆಗಳ ಮಾಹಿತಿಯನ್ನು ಎಲ್.ಇ.ಡಿ ಪರದೆ ವಾಹನಗಳ ಮೂಲಕ ಮಾಹಿತಿಯನ್ನು ಜನರ ಬಳಿಗೆ ಕೊಂಡೊಯ್ಯುಲಾಗುತ್ತಿದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿ.ಎನ್.ವೇಣುಗೋಪಾಲ್, ಶಿವಾರೆಡ್ಡಿ, ಮಹೇಶ್ ಬೈ, ಕೆ.ಎಂ.ರಾಜಶೇಖರರೆಡ್ಡಿ, ಡಾ.ಬಸವಮಂಜೇಶ್, ಶಂಕರಲಾಲ್, ನಗರಸಭೆ ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!