Chintamani : ಚಿಂತಾಮಣಿ ತಾಲ್ಲೂಕಿನ ಯಗವಕೋಟೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ (VSSN President Election) ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು.
ಚುನಾವಣೆ ಪ್ರಕ್ರಿಯೆಯಲ್ಲಿ ನಿಗದಿತ ಸಮಯದಲ್ಲಿ ಹೊಸಹುಡ್ಯ ಗ್ರಾಮದ ರಾಜಣ್ಣ ಹೊರತುಪಡಿಸಿ ಮತ್ತ್ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾದ ನಂತರ ಚುನಾವಣಾಧಿಕಾರಿ ಕವಿತಾ, ರಾಜಣ್ಣ ರವರನ್ನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
ಈ ಸಂಧರ್ಭದಲ್ಲಿ ಮಾತನಾಡಿದ ರಾಜಣ್ಣ “ಆಡಳಿತ ಮಂಡಳಿ ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘದ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು. ಸ್ತ್ರೀಶಕ್ತಿ ಸಂಘಗಳಿಗೆ ಮತ್ತು ರೈತರಿಗೆ ಸಂಘದಿಂದ ಬೆಳೆಸಾಲ ನೀಡಲಾಗುವುದು” ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗಿರೆಡ್ಡಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ್, ನಿರ್ದೇಶಕರಾದ ವೆಂಕಟರವಣಪ್ಪ, ರೆಡ್ಡಪ್ಪ, ರಾಧಾಕೃಷ್ಣ, ಆನಂದರೆಡ್ಡಿ, ಸಿ.ವಿ.ವೆಂಕಟರವಣಪ್ಪ, ನಾಗರಾಜು, ನಾರಾಯಣಸ್ವಾಮಿ, ನಾಗರಾಜಪ್ಪ, ಜಯಮ್ಮ, ಲಕ್ಷ್ಮೀದೇವಮ್ಮ, ಸುಶೀಲಮ್ಮ ಮತ್ತಿತರರು ಉಪಸ್ಥಿತರಿದ್ದರು.