Chintamani : ಕಳೆದ 5 ದಿನಗಳಿಂದ ನಾಪತ್ತೆಯಾಗಿದ್ದ ಚಿಂತಾಮಣಿ ತಾಲ್ಲೂಕಿನ ಜಂಗಾಲಹಳ್ಳಿಯ ಯುವಕನ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.
ಗ್ರಾಮದ ಚಂದನ್ (21) ಮೃತಪಟ್ಟ ಯುವಕನಾಗಿದ್ದು, ಸೆ.25 ರಿಂದ ಈತನು ಕಾಣೆಯಾಗಿದ್ದ. ಈ ಬಗ್ಗೆ ಯುವಕನ ತಂದೆ ಸೆ.27 ರಂದು ಕುಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಗುರುವಾರ ಪಾಪಾಗ್ನಿ ನದಿ ತೀರದ ತೋಪಿನಲ್ಲಿ ಯುವಕನ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯಲ್ಲ; ಕೊಲೆ ಎಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಸಬ್ ಇನ್ಸ್ ಸ್ಪೆಕ್ಟರ್ ನಾರಾಯಣಸ್ವಾಮಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಯುವಕನ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur