Chikkaballapur : ಬಾಗೇಪಲ್ಲಿಯ ಜೀವನಾಡಿಯಾದ ಚಿತ್ರಾವತಿ ಜಲಾಶಯಕ್ಕೆ (Chitravathi Reservoir) ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ (SM Krishna) ಅವರ ಹೆಸರಿನ ಬದಲಾಗಿ, ಈ ಪ್ರದೇಶದ ಹೋರಾಟಗಾರರಾಗಿದ್ದ ಮಾಜಿ ಶಾಸಕ ಜಿ.ವಿ. ಶ್ರೀರಾಮರೆಡ್ಡಿ ಅವರ ಹೆಸರನ್ನ ಇಡಬೇಕು ಎಂದು ಆಗ್ರಹಿಸಿ ‘ಚಿತ್ರಾವತಿ ಹೋರಾಟ ಸಮಿತಿ’ ನೇತೃತ್ವದಲ್ಲಿ ಬಾಗೇಪಲ್ಲಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ವರೆಗೆ ಬೈಕ್ ರ್ಯಾಲಿ (protest) ನಡೆಯಿತು.
ಈ ಜಲಾಶಯಕ್ಕೆ ಎಸ್.ಎಂ. ಕೃಷ್ಣ ಹೆಸರನ್ನು ಇಡಲಾಗುತ್ತದೆ ಎಂದು ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಜಿಲ್ಲೆಯ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಇತ್ತೀಚೆಗಷ್ಟೇ ಪ್ರಕಟಿಸಿ, ಸಚಿವ ಸಂಪುಟದ ಸಭೆಯಲ್ಲೂ ಈ ಬಗ್ಗೆ ತೀರ್ಮಾನವಾಗಿದೆಯೆಂದು ಅವರು ತಿಳಿಸಿದರು. “ಚಿತ್ರಾವತಿ ಎಂಬ ಹೆಸರು ಬಾಗೇಪಲ್ಲಿಯ ಜನರಿಗೆ ಭಾವನಾತ್ಮಕ ಸಂಬಂಧವಿರುವದು. ಈ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಿದ ಜಿ.ವಿ. ಶ್ರೀರಾಮರೆಡ್ಡಿ ಅವರ ಹೆಸರನ್ನೇ ಜಲಾಶಯಕ್ಕೆ ಇಡಬೇಕು,” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಎಂ.ಪಿ. ಮುನಿವೆಂಕಟಪ್ಪ, ಕೃಷಿಕೂಲಿಕಾರರ ಸಂಘದ ಲಕ್ಷ್ಮಿನಾರಾಯಣರೆಡ್ಡಿ, ಡಾ. ಅನಿಲ್ ಕುಮಾರ್, ಬಿ.ಎನ್. ಮುನಿಕೃಷ್ಣಪ್ಪ, ಚನ್ನರಾಯಪ್ಪ, ರಮಣ, ಶಿವಪ್ಪ, ಬೈರಾರೆಡ್ಡಿ, ದೇವರಾಜ್, ಕೃಷ್ಣಪ್ಪ, ರಾಜಪ್ಪ, ನಾಗರಾಜ್, ರಘುರಾಮರೆಡ್ಡಿ, ಮುನಿಯಪ್ಪ, ಈಶ್ವರರೆಡ್ಡಿ, ರಮಾಮಣಿ ಮತ್ತಿತರರು ಭಾಗವಹಿಸಿದ್ದರು.
