Chikkaballapur : ಮಾಘಮಾಸದ ಕುಮಾರ ಷಷ್ಠಿಯ ಪ್ರಯುಕ್ತ ಸೋಮವಾರ ಚಿಕ್ಕಬಳ್ಳಾಪುರ ನಗರದ ಹೊರ ವಲಯದ ಚಿತ್ರಾವತಿಯ ಸುಬ್ರಹ್ಮಣ್ಯೇಶ್ವರ ಸ್ವಾಮಿ ರಥೋತ್ಸವ (Chitravati Subramnyeshwara Rathotsava) ಸಡಗರ ಸಂಭ್ರಮದಿಂದ ನಡೆಯಿತು.
ರಥೋತ್ಸವದ ಅಂಗವಾಗಿ ಸ್ವಾಮಿಗೆ ರುದ್ರಾಭಿಷೇಕ, ಪುಣ್ಯಾಹ, ಕಳಶ ಸ್ಥಾಪನೆ, ಧ್ವಜಾರೋಹಣ, ಅಂಕುರಾರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಉತ್ಸವ ಮೂರ್ತಿಯನ್ನು ರಥದಲ್ಲಿ ಶಾಸ್ತ್ರೋಕ್ತವಾಗಿ ಪ್ರತಿಷ್ಠಾಪಿಸಿ ದೇವಾಲಯವನ್ನು ಒಂದು ಸುತ್ತು ಹಾಕಲಾಯಿತು. ಭಕ್ತರು ರಥಕ್ಕೆ ಬಾಳೆಹಣ್ಣು, ದವಳವನ್ನು ಎಸೆಯುವ ಮೂಲಕ ಭಕ್ತಿ ಅರ್ಪಿಸಿದರು.
ರಥೋ ತ್ಸವಕ್ಕೆ ಜಿಲ್ಲೆ ಸೇರಿದಂತೆ ನೆರೆಯ ರಾಜ್ಯಗಳ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ರಾಷ್ಟ್ರೀಯ ಹೆದ್ಧಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.