Chintamani : ಕೋಲಾರ ಲೋಕಸಭಾ ಕ್ಷೇತ್ರದ (Kolar Lokasabha Election) Congress ಅಭ್ಯರ್ಥಿ ಕೆ.ವಿ.ಗೌತಮ್ (K V Gautham) ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ (Dr M C Sudhakar) ರವರ ಜೊತೆ ಭಾನುವಾರ ಚಿಂತಾಮಣಿ ತಾಲ್ಲೂಕಿನ ಕೈವಾರ (Kaiwara) ದಲ್ಲಿ ಚುನಾವಣಾ ಪ್ರಚಾರ (Election Campaign) ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ “ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದ ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿದ್ದು ಚುನಾವಣಾ ಪೂರ್ವದಲ್ಲಿ ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ನುಡಿದಂತೆ ಯಾವುದೇ ಜಾತಿ, ಜನಾಂಗ, ಧರ್ಮ, ಪಕ್ಷ, ಭಾಷೆಯ ತಾರತಮ್ಯವಿಲ್ಲದೆ 5 ಗ್ಯಾರಂಟಿಗಳನ್ನು ಅನುಷ್ಟಾನಗೊಳಿಸಿದೆ. ಈ ಬಾರಿ ಕಾಂಗ್ರೆಸ್‌ಗೆ ಅವಕಾಶ ನೀಡಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾಬಾ ನಾಗರಾಜ್ ಮಾತನಾಡಿದರು. ಕೈವಾರ ಹೋಬಳಿಯ ಕಾಂಗ್ರೆಸ್ ಪಕ್ಷದ ಎಲ್ಲ ಮುಖಮಡರು, ಕಾರ್ಯಕರ್ತರು ಭಾಗವಹಿಸಿದ್ದರು.