25.9 C
Bengaluru
Saturday, February 28, 2026

ಸಂವಿಧಾನ ಜಾಗೃತಿ ಜಾಥಾ : ಪೂರ್ವ ಸಿದ್ದತೆ ಸಭೆ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ವಿವಿಧ ಸಂಘಟನೆಗಳು, ಸರ್ಕಾರೇತರ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ‘ಸಂವಿಧಾನ ಜಾಗೃತಿ ಜಾಥಾ’ದ (constitution awareness jatha) ಪೂರ್ವ ಸಿದ್ದತೆ ಸಭೆ (Pre-preparedness meeting) ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ” ಜ.26 ರಿಂದ ಫೆ.25 ರವರೆಗೆ ನಡೆಯುವ ‘ಸಂವಿಧಾನ ಜಾಗೃತಿ ಜಾಥಾ’ದಲ್ಲಿ ಜಿಲ್ಲೆಯ 157 ಗ್ರಾಮ ಪಂಚಾಯಿತಿಗಳು ಮತ್ತು 6 ನಗರಾಡಳಿತ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಎಲ್ಲ ಸಂಘಟನೆಗಳು ಭಾಗವಹಿಸಬೇಕು. 26ರ ಗಣರಾಜೋತ್ಸವದ ದಿನ ನಗರದ ಜಿಲ್ಲಾ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಾಥಾಗೆ ಚಾಲನೆ ನೀಡಲಿದ್ದಾರೆ” ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎನ್.ನಾಗೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿ ಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಪಂಚಾ ಯಿತಿ ಉಪಕಾರ್ಯದರ್ಶಿ ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!