Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ‘ಸಂವಿಧಾನ ಜಾಗೃತಿ ಜಾಥಾ’ (Constitution Awareness Jatha) ಆಯೋಜನೆಯ ಪೂರ್ವಸಿದ್ಧತಾ ಸಭೆ (Preparatory Meeting)ನಡೆಯಿತು.
ಸಂವಿಧಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ‘ಸಂವಿಧಾನ ಜಾಗೃತಿ ಜಾಥಾ ಸಮಾವೇಶವನ್ನು’ ಅಭಿಯಾನದ ರೂಪದಲ್ಲಿ ಜಿಲ್ಲೆಯಾದ್ಯಂತ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಜ.26ರ ಗಣರಾಜೋತ್ಸವ ದಿನದದಂದು ನಗರದ ಜಿಲ್ಲಾ ಸರ್.ಎಂ.ವಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ಜಾಗೃತಿ ಜಾಥಾಗೆ ಚಾಲನೆ ನೀಡಲಿದ್ದು ನಂತರ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿ ಮಟ್ಟದಲ್ಲಿ, ನಗರಾಡಳಿತ ಪ್ರದೇಶಗಳಲ್ಲಿ ಫೆ.23ರವರೆಗೆ ಜಾಥಾವು ನಡೆಯಲಿದೆ. ಫೆ.24ರಂದು ಜಿಲ್ಲಾಡಳಿತ ಭವನ ತಲುಪಿ ಬೆಂಗಳೂರಿಗೆ ತೆರಳಿ ಅರಮನೆ ಮೈದಾನದಲ್ಲಿ ನಡೆಯವ ‘ಸಂವಿಧಾನ ಜಾಗೃತಿ ಜಾಥಾ’ದ ರಾಷ್ಟೀಯ ಸಮಾವೇಶದಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಮುಕ್ತಾಯ ಆಗಲಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಮ್ ಖಾತಿಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ, ತಹಶೀಲ್ದಾರ್ ಅನಿಲ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.