Chikkaballapur : November 26, ಭಾರತ ದೇಶಕ್ಕೆ ಮಹತ್ವದ ದಿನವಾಗಿದ್ದು 1949 ರಲ್ಲಿ ಭಾರತ ಸಂವಿಧಾನ ಅಂಗೀಕಾರಗೊಂಡ ದಿನವನ್ನು ಸಂವಿಧಾನ ದಿನಾಚರಣೆ (Constitution Day of India) ಎಂದು ಆಚರಿಸಲಾಗುತ್ತದೆ.
ಚಿಕ್ಕಬಳ್ಳಾಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಪದವಿ ಬಾಲಕರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ದೇಶದ ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಬಾಗೇಪಲ್ಲಿ :
ಬಾಗೇಪಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಮತ್ತು ಸಮಾಜ ಕಲ್ಯಾಣಾಧಿಕಾರಿಗಳ ಇಲಾಖೆ ವತಿಯಿಂದ ಮಂಗಳವಾರ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂವಿಧಾನ ದಿನವನ್ನು ಆಚರಿಸಲಾಯಿತು.
ಸಿವಿಲ್ ನ್ಯಾಯಾಲಯ
ಬಾಗೇಪಲ್ಲಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಸಂವಿಧಾನ ದಿನಾಚರಣೆ ಹಮ್ಮಿಕೊಳ್ಳಲಾಯಿತು.
ಗೌರಿಬಿದನೂರು:
ಗೌರಿಬಿದನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆದ ‘ಮರೆಯಲಾಗದ ಮಹನೀಯರು’ ಎಂಬ ಕಾರ್ಯಕ್ರಮದಲ್ಲಿ ಭಾರತ ಸಂವಿಧಾನದ ಮಹತ್ವವನ್ನು ಬೋಧಿಸಲಾಗಿತ್ತು.
ಗುಡಿಬಂಡೆ:
ಗುಡಿಬಂಡೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ದಲಿತ ಪರ ಸಂಘಟನೆಗಳು ಮತ್ತು ಸಮಾಜ ಕಲ್ಯಾಣ ಇಲಾಖೆ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಂಡು, ಎಲ್ಲರೂ ಸಂವಿಧಾನ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಶಿಡ್ಲಘಟ್ಟ:
ಶಿಡ್ಲಘಟ್ಟ ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಸರ್ಕಾರಿ ಕಾಲೇಜು ಮತ್ತು ಸಮಾಜ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನ ಮತ್ತು ಕಾನೂನು ಅರಿವು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಸಾಮಾನ್ಯವಾಗಿ, ಸಂವಿಧಾನ ದಿನ ಸಂಭ್ರಮದಲ್ಲಿ ದೇಶಾದ್ಯಾಂತ ಸಂವಿಧಾನದ ಮಹತ್ವ ಮತ್ತು ಅದರ ಪ್ರಸ್ತಾಪವನ್ನು ಒತ್ತಿ ಹೇಳಲಾಗುತ್ತಿದೆ.