Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಮತ್ತು ತಾಲ್ಲೂಕು ತನಿಖಾದಳದಿಂದ ತಂಬಾಕು ಮುಕ್ತ ಯುವ ಅಭಿಯಾನದ ಪ್ರಯುಕ್ತ ನಗರದ BB ರಸ್ತೆ, KSRTC ಬಸ್ ನಿಲ್ದಾಣದಲ್ಲಿ ಮಂಗಳವಾರ ನಿಯಮಬಾಹಿರವಾಗಿ ತಂಬಾಕು ಪದಾರ್ಥಗಳ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಕೋಟ್ಪಾದಾಳಿ (COTPA Raid) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್ “ತಂಬಾಕಿನಲ್ಲಿ 700 ವಿಷಯುಕ್ತ ರಾಸಾಯನಿಕಗಳಿವೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ದೀರ್ಘಕಾಲದ ಆರೋಗ್ಯ ಸಂಬಂಧಿತ ಕಾಯಿಲೆಗಳು ಬರುತ್ತವೆ. ತಂಬಾಕು ಸೇವನೆಯನ್ನು ತ್ಯಜಿಸಿ ಆರೋಗ್ಯಯುತವಾಗಿ ಬಾಳಬೇಕು” ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಸರ್ವೆಕ್ಷಣಾಧಿಕಾರಿ ಡಾ. ಕೃಷ್ಣಪ್ರಸಾದ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತ ಮಂಜುನಾಥ, ತಾಲ್ಲೂಕ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾರಾಯಣಸ್ವಾಮಿ, ಗಂಗಾಧರ್ ಮತ್ತು ಪೊಲೀಸ್ ಸಿಬ್ಬಂದಿ ಪಾಲ್ಗೊಂಡಿದ್ದರು.