Sidlaghatta : ಮಳೆ ಹಾನಿಯಿಂದ ತಾಲ್ಲೂಕಿನ ಗಂಜಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡ ಬಂದ್ರಘಟ್ಟ ಮತ್ತು ಚಿಕ್ಕ ಬಂದ್ರಘಟ್ಟ ಹಾಗೂ ಗಂಜಿಕುಂಟೆ ಗ್ರಾಮಗಳನ್ನು ಸಂಪರ್ಕಿಸುವ ಬ್ರಿಡ್ಜ್ ಸಂಪೂರ್ಣ ಹಾನಿ ಆಗಿರುವುದನ್ನು ಜಿಲ್ಲಾಧಿಕಾರಿ ಆರ್.ಲತಾ (Chikkaballapur DC R Latha) ಅವರು ಪರಿಶೀಲಿಸಿದರು.
ಹರಿಯುವ ನೀರಿನಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಅವರು ಕಾಲ್ನಡಿಗೆ ಮೂಲಕ ಬಹುದೂರ ನಡೆದು,ಹಳ್ಳಿಗಳ ನಡುವೆ ತಾತ್ಕಾಲಿಕ ಸಂಪರ್ಕಕ್ಕಾಗಿ ನಿರ್ಮಿಸಿರುವ ರಿಂಗ್ ಬಂಡ್ ರಸ್ತೆಯನ್ನು ವೀಕ್ಷಿಸಿದರು. ದುರಸ್ಥಿ ಕಾಮಗಾರಿ ಕೈಗೊಂಡು ಸುರಕ್ಷಿತ ಹಾಗೂ ಶಾಶ್ವತ ಸೇತುವೆ ನಿರ್ಮಾಣಕ್ಕೆ ತುರ್ತು ಕ್ರಮವಹಿಸಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ರಾಮಸ್ಥರ ಸಮಸ್ಯೆಗಳನ್ನು ಕೇಳಿ ರೈತರಿಗೆ ಆಗಿರುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಜಿಲ್ಲಾಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಸಣ್ಣ ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನರೇಂದ್ರಸ್ವಾಮಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ, ಪಿ.ಆರ್.ಇ.ಡಿ ಯ ಕಾರ್ಯಪಾಲಕ ಎಂಜಿನಿಯರ್ ರಾಮಕೃಷ್ಣಪ್ಪ, ತಹಶೀಲ್ದಾರ್ ರಾಜೀವ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur