Chikkaballapur : ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108ನೇ ಜಯಂತಿ (D Devaraj Urs 108 Birth Anniversary) ಕಾರ್ಯಕ್ರಮದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿ.ದೇವರಾಜ ಅರಸು ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗೌರಿಬಿದನೂರು
ಗೌರಿಬಿದನೂರು ನಗರದಲ್ಲಿ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ.ದೇವರಾಜು ಅರಸು ಅವರು 108ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಯಿತು.
ಗುಡಿಬಂಡೆ
ಗುಡಿಬಂಡೆ ಪಟ್ಟಣದ ದೇವರಾಜು ಅರಸು ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ದೇವರಾಜ ಅರಸು ಜಯಂತಿ ಆಚರಿಸಲಾಯಿತು.
ಶಿಡ್ಲಘಟ್ಟ
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾನುವಾರ ಮಾಜಿ ಮುಖ್ಯಮಂತ್ರಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 108ನೇ ಜಯಂತಿ ಆಚರಿಸಲಾಯಿತು.
ಚಿಂತಾಮಣಿ
ಚಿಂತಾಮಣಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ವತಿಯಿಂದ ಭಾನುವಾರ ಚಿಂತಾಮಣಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.