Chikkaballapur : ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಸೋಮವಾರ ದಲಿತ ಸಂಘಟನೆಗಳ ಒಕ್ಕೂಟದಿಂದ ಜಾತಿ ನಿಂದನೆ ಮತ್ತು ಘನತ್ಯಾಜ್ಯ ವಿಲೇವಾರಿ ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಬಂಧಿತರಾಗಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ (MLA Munirathna) ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಅವರು ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಪ್ರತಿಭಟಿಸಲಾಯಿತು (Protest).
ಪ್ರತಿಭಟನಾ ಮೆರವಣಿಗೆ ನಡೆಸಿದ ಸದಸ್ಯರು ಮುನಿರತ್ನ ಅಣಕು ಶವಯಾತ್ರೆ ನಡೆಸಿ ಶಿಡ್ಲಘಟ್ಟ ವೃತ್ತದಲ್ಲಿ ಅಣಕುಶವವನ್ನು ದಹಿಸಿದರು. ಮುನಿರತ್ನ ವಿರುದ್ಧ ಘೋಷಣೆಗಳನ್ನು ಕೂಗಿದರು. ತಹಶೀಲ್ದಾರ್ ಅನಿಲ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ವೆಂಕಟರಮಣಪ್ಪ, ಜಿಲ್ಲಾ ಅಧ್ಯಕ್ಷ ಬಿ.ಈಶ್ವರಪ್ಪ, ಅಶ್ವತ್ಥಪ್ಪ, ಅಪ್ಪರೆಡ್ಡಿ, ತ್ಯಾಗರಾಜ್, ಸೊಪ್ಪಳ್ಳಿ ಮೂರ್ತಿ, ಶ್ರೀಧರ್, ಶ್ರೀನಿವಾಸ್, ಪ್ರಕಾಶ್, ಅಶೋಕ್, ಮುನಿ ಆಂಜನಪ್ಪ ಹಾಗೂ ಒಕ್ಕೂಟದ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.