Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ದೀನದಯಾಳ್ ಅಂತ್ಯೋದಯ ಯೋಜನೆ (Deen Dayal Upadhyaya Antyodaya Yojana) ಹಾಗೂ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (National Urban Livelihood Mission) (NULM) ದಡಿ ಬ್ಯಾಂಕ್ ಅಧಿಕಾರಿಗಳಿಗೆ ಕಾರ್ಯಾಗಾರ (Bank Manager Workshop) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ “ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಮಂಜೂರಾಗಿರುವ ಫಲಾನುಭವಿಗಳಿಗೆ ನಿಗದಿತ ಸಮಯದ ಒಳಗೆ ಸಾಲ ಮಂಜೂರು ಮಾಡದ ಬ್ಯಾಂಕುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಹೇಳಿದರು. ಸಭೆಗೆ ಗೈರಾಗಿರುವ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮಕೈಗೊಳ್ಳಲು ಎಸ್‌ಎಲ್‌ಬಿಸಿ ಅವರಿಗೆ ವರದಿ ಮಾಡಲು ಮತ್ತು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ ಪಿಎಂ ಸ್ವಾನಿಧಿ ಯೋಜನೆಯಡಿ ಸಾಲ ಮಂಜೂರು ಮಾಡಿರುವ ಬಗ್ಗೆ ಪರಿಶೀಲಿಸಲು ಸೂಚಿಸಿದರು.
ಕಾರ್ಯಾಗಾರದಲ್ಲಿ ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಡೇ–ನಲ್ಮ್ ಜಿಲ್ಲಾ ಅಭಿಯಾನ ವ್ಯವಸ್ಥಾಪಕ ವೆಂಕಟಾಚಲಪತಿ, ಡೇ-ನಲ್ಮ್ ಯೋಜನೆಯ ವಿಷಯ ನಿರ್ವಾಹಕರುಗಳಾದ ಸುಧಾ, ಹನುಮಂತರಾಯಪ್ಪ, ರಂಗಸ್ವಾಮಿ, ಅರುಣ್ ಕುಮಾರ್, ಜಯರಾಮ್, ಶಶಿಕಲಾ, ಕಾರ್ಯಪಾಲಕ ಎಂಜಿನಿಯರ್ ಮಾಧವಿ, ಕೌಶಲ್ಯಾಭಿವೃದ್ಧಿ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಬ್ಯಾಂಕುಗಳ ವ್ಯವಸ್ಥಾಪಕರು ಉಪಸ್ಥಿತರಿದ್ದರು.