ಬಾಗೇಪಲ್ಲಿ ತಾಲ್ಲೂಕಿನ ಯಲ್ಲಂಪಲ್ಲಿ, ಪರಗೋಡು ಗ್ರಾಮ ಪಂಚಾಯ್ತಿಗಳ ಮತ್ತು ನಗರದ ವಾರ್ಡ್ ಗಳಿಗೆ ಜಿಲ್ಲಾಧಿಕಾರಿ ಆರ್ ಲತಾ ಭೇಟಿ ನೀಡಿ ಕೋವಿಡ್ ಸೋಂಕು ನಿಯಂತ್ರಕ್ಕೆ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಗಳ ಕಾರ್ಯವೈಖರಿಯನ್ನು ಪರಿಶೀಲಿಸಲಾಯಿತು.
ನೋಡಲ್ ಅಧಿಕಾರಿಗಳು, ಸದಸ್ಯರು ಮತ್ತು ಆಶಾ ಕಾರ್ಯಕರ್ತೆಯರು ಪ್ರತಿದಿನ ತಮ್ಮ ವ್ಯಾಪ್ತಿ ಯಲ್ಲಿನ ಪ್ರತಿ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮನೆಯಲ್ಲಿನ ಸದಸ್ಯರ ಆರೋಗ್ಯದ ಬಗ್ಗೆ ಮಾಹಿತಿ ಪಡೆದು, ಹೋಂ ಐಸೋಲೇಷನ್ ನಲ್ಲಿ ಇರುವ ಸೋಂಕಿತರ ಮೇಲೆ ಹೆಚ್ಚಿನ ನಿಗಾವಹಿಸಿ, ಸಾರ್ವಜನಿಕರಿಗೆ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸಲು ಸೂಚಿಸಲಾಯಿತು. ಹೋಂ ಐಸೋಲೇಷನ್ ನಲ್ಲಿ ಇರುವ ಸೋಂಕಿತರೊಂದಿಗೆ ಖುದ್ದು ಮಾತನಾಡಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾ ಪಂಚಾಯಿತಿ ಸಿಇಓ ಪಿ ಶಿಕಾಶಂಕರ್, ಉಪವಿಭಾಗಾಧಿಕಾರಿ ರಘುನಂದನ್, ಬಾಗೇಪಲ್ಲಿ ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿ ಯಶಸ್ವಿನಿ, ತಹಸೀಲ್ದಾರ್ ದಿವಾಕರ್ ಉಪಸ್ಥಿತರಿದ್ದರು.