Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಗಾಂಧಿ ಭವನಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ (Deputy Commissioner P N Ravindra) ಸೋಮವಾರ ಭೇಟಿ ನೀಡಿ(Gandhi Bhavan Inspection) ಪರಿಶೀಲಿಸಿದರು.
ಅಂತಿಮ ಹಂತದಲ್ಲಿರುವ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಎಂಜಿನಿಯರ್‌ಗೆ ಸೂಚಿಸಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಹಾತ್ಮ ಗಾಂಧೀಜಿ ಅವರ ತತ್ವ, ಆದರ್ಶ, ಚಿಂತನೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ₹ 3 ಕೋಟಿ ವೆಚ್ಚದಲ್ಲಿ ಪ್ರತಿ ಜಿಲ್ಲಾ ಕೇಂದ್ರದಲ್ಲಿ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ ಎಂದು ಸುದ್ಧಿಗಾರರಿಗೆ ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ, ಯೋಜನಾ ಅಭಿಯಂತರ ತೇಜಸ್ ರೆಡ್ಡಿ, ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.