Sunday, June 11, 2023
HomeGudibandeGudibande : ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ

Gudibande : ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ

- Advertisement -
- Advertisement -
- Advertisement -
- Advertisement -

Gudibande : ಪ್ರತಿ ಮಂಗಳವಾರ ಜಿಲ್ಲೆಯ ತಹಶೀಲ್ದಾರ್ ಕಚೇರಿಗಳಿಗೆ ಜಿಲ್ಲಾಧಿಕಾರಿ (Deputy Commissioner) ಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶದನ್ವಯ ಗುಡಿಬಂಡೆ ಕಚೇರಿಗೆ ಜಿಲ್ಲಾಧಿಕಾರಿ R Latha ಭೇಟಿ ನೀಡಿ ಪರಿಶೀಲನೆ (Inspection) ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿದರು.

ಗುಡಿಬಂಡೆ ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯ ಗಮನಕ್ಕೆ ತಂದ ನಂತರ Aadhaar ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಕುರಿತು ಜಿಲ್ಲಾಧಿಕಾರಿ ಆರ್. ಲತಾ ಮಾಹಿತಿ ಪಡೆದರು. RRT, ಭೂ ದಾಖಲೆಗಳ ಅಭಿಲೇಖಾಲಯ, ಪಿಂಚಣಿ ವಿಭಾಗ, ಚುನಾವಣೆ ವಿಭಾಗ, ಸರ್ವೆ ಇಲಾಖೆ ಸೇರಿ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಕಚೇರಿಯ ಕಡತಗಳನ್ನು ಪರಿಶೀಲನೆ ನಡೆಸಿ ಸಾರ್ವಜನಿಕರ ಅರ್ಜಿಗಳ ಪ್ರಗತಿಯ ಮಾಹಿತಿಯನ್ನು ಪರಿಶೀಲಿಸಿ, ಕಡತಗಳನ್ನು ಸರಿಯಾಗಿ ನಿರ್ವಹಿಸದ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡುವಲ್ಲಿ ತಡ ಮಾಡುತ್ತಿರುವ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

ಗ್ರೇಡ್ 2 ತಹಶೀಲ್ದಾರ್ ಮಹೇಶ್ ಪತ್ರಿ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

0.00 avg. rating (0% score) - 0 votes
- Advertisement -
RELATED ARTICLES

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!