Bagepalli : ರಾಜ್ಯ ಸರ್ಕಾರದ ಆದೇಶದ ಅನ್ವಯ ಪ್ರತಿ ಮಂಗಳವಾರ ಜಿಲ್ಲೆಯ ತಹಶೀಲ್ದಾರ್ ಕಚೇರಿಗಳಿಗೆ ಜಿಲ್ಲಾಧಿಕಾರಿಗಳು (Deputy Commissioner) ಭೇಟಿ ನೀಡಿ ಪರಿಶೀಲಿಸಬೇಕಾಗಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ (DC) ಎನ್.ಎಂ.ನಾಗರಾಜ್ (N M Nagaraj) ಬಾಗೇಪಲ್ಲಿ ತಹಶೀಲ್ದಾರ್ ಕಚೇರಿ ಹಾಗೂ ತಾಲ್ಲೂಕು ಆಸ್ಪತ್ರೆಗೆ (Bagepalli Taluk Hospital) ಭೇಟಿ (Visit) ನೀಡಿ ಸಾರ್ವಜನಿಕರು ಮತ್ತು ರೋಗಿಗಳ ಸಮಸ್ಯೆಗಳನ್ನು ಕೇಳಿದರು.
ಆಧಾರ್ ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿ ಮೂಲಸೌಕರ್ಯಗಳ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಪಡೆದರು.
ಅಧಿಕಾರಿಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ “ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ಸಮಸ್ಯೆಗಳ ವಿಲೇವಾರಿಗೆ ತಕ್ಷಣವೇ ಕ್ರಮವಹಿಸಿ ತ್ವರಿತವಾಗಿ ಕೆಲಸಗಳನ್ನು ಮಾಡಿಕೊಡಬೇಕು” ಎಂದು ತಿಳಿಸಿದರು.
ತಹಶೀಲ್ದಾರ್ ವೈ.ವಿ ರವಿ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.