Bagepalli : ಬಾಗೇಪಲ್ಲಿ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಆರ್.ಲತಾ (Deputy Commissioner R. Latha) ಮಂಗಳವಾರ ದಿಢೀರನೆ ಭೇಟಿ ನೀಡಿ ಚುನಾವಣಾ, ಲೆಕ್ಕಪತ್ರಗಳ, ಭೂದಾಖಲೆ, ಪಿಂಚಣಿ, ಮುಜರಾಯಿ ಸೇರಿದಂತೆ ವಿವಿಧ ಶಾಖೆಗಳ ಕಡತಗಳನ್ನು ಪರಿಶೀಲನೆ ಮಾಡಿ ಅಧಿಕಾರಿಗಳಿಗೆ, ಸಿಬ್ಬಂದಿಯ ಜತೆ ಚರ್ಚಿಸಿದರು. ಕೂಡಲೇ ವಿಲೇವಾರಿ ಆಗದಿರುವ ಕಡತಗಳನ್ನು ನಿರ್ವಹಿಸಿ, ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ತಾಲ್ಲೂಕು ತಹಶೀಲ್ದಾರ್ ಕೊಠಡಿಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ಕೂಡಲೇ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ತಹಶೀಲ್ದಾರ್ ವೈ.ರವಿ ಅವರಿಗೆ ಸೂಚಿಸಿದರು.
ತಹಶೀಲ್ದಾರ್ (Tehsildar) ವೈ.ರವಿ, ಗ್ರೇಡ್-2 ತಹಶೀಲ್ದಾರ್ ಸುಬ್ರಮಣ್ಯಂ, ಶಿರಸ್ತೇದಾರ್ ನಾಗರಾಜ್ ಹಾಗೂ ವಿವಿಧ ಶಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur