Chikkaballapur District: ಬುಧವಾರ ಚಿಕ್ಕಬಳ್ಳಾಪುರ ತಾಲ್ಲೂಕಿನ ಗ್ರಾಮಗಳಲ್ಲಿ ಭೂಕಂಪದ (Earthquake) ಅನುಭವವಾಗಿದ್ದು, ಜಿಲ್ಲಾಧಿಕಾರಿ ಆರ್.ಲತಾ (Deputy Commissioner R.Latha), ಉಪವಿಭಾಗಾಧಿಕಾರಿ ರಘುನಂದನ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮತ್ತಿತರ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಬಿರುಕುಬಿಟ್ಟ ಮನೆಗಳನ್ನು ಪರಿಶೀಲಿಸಿ, ಜನರಿಂದ ಮಾಹಿತಿ ಪಡೆದು ಅವರಲ್ಲಿ ಧೈರ್ಯ ತುಂಬಿದರು.
‘ಜಿಲ್ಲಾದ್ಯಂತ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗಿದ್ದು, ಅಂತರ್ಜಲದ ಮಟ್ಟ ಏರಿಕೆಯಿಂದ ಭೂಮಿಯ ಒಳಪದರದಲ್ಲಿ ಒತ್ತಡವು ಹೆಚ್ಚಾಗಿ ಭೂಕಂಪನವಾಗಿರುವ ಸಾಧ್ಯತೆ ಇರುವುದಾಗಿ, ಅಂತರ್ಜಲ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಅವಲೋಕಿಸಿದ್ದಾರೆ.
ಭೂಕಂಪನದ ತೀವ್ರತೆಯ ನಕಾಶೆಯನ್ವಯ ಈ ಭೂಕಂಪಗಳ ತೀವ್ರತೆಯು ಅತ್ಯಂತ ಕನಿಷ್ಟ ಪ್ರಮಾಣದ್ದಾಗಿದ್ದು, ಸ್ಥಳೀಯ ಸಮುದಾಯಕ್ಕೆ ಯಾವುದೇ ರೀತಿಯಲ್ಲಿಯೂ ಅಪಾಯಕಾರಿಯಲ್ಲವೆಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವು ತಿಳಿಸಿದ್ದು, ಇದರಿಂದ ಸ್ಥಳೀಯ ಜನರು ಗಾಬರಿಗೊಳ್ಳುವ ಹಾಗೂ ಹೆಚ್ಚಿನ ಆತಂಕಗೊಳ್ಳುವ ಅವಶ್ಯಕತೆಯಿಲ್ಲ’ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur