26.5 C
Bengaluru
Thursday, November 21, 2024

ಜಿಲ್ಲೆಯಲ್ಲಿ 49,463 ಎಕರೆ ಡೀಮ್ಡ್‌ ಅರಣ್ಯ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ (Dr MC Sudhakar) ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಅಧಿಸೂಚಿತ ಪರಿಭಾವಿತ ಅರಣ್ಯ ಪ್ರದೇಶಗಳ ಜಂಟಿ ಸರ್ವೆ ಕಾರ್ಯದ ಪ್ರಗತಿ ಪರಿಶೀಲನಾ ಸಭೆ (Deemed forest Survey KDP Meeting) ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಸಚಿವರು “ಕಂದಾಯ, ಅರಣ್ಯ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದಲ್ಲಿ ಜಂಟಿ ಸಮೀಕ್ಷೆ ನಡೆಸಿ ಜಿಲ್ಲೆಯಲ್ಲಿ 49,463 ಎಕರೆ ಪರಿಭಾವಿತ (ಡೀಮ್ಡ್‌) ಅರಣ್ಯ ಪ್ರದೇಶದ ಸರ್ವೆ ಮಾಡಲಾಗಿದೆ. ಡೀಮ್ಡ್ ಅರಣ್ಯ ಪ್ರದೇಶದಲ್ಲಿ ಕೆರೆ ಕುಂಟೆ, ಹಿಡುವಳಿ ಜಮೀನು, ಕಲ್ಲುಬಂಡೆ, ಜಮೀನು ಅಥವಾ ಅರಣ್ಯ ಇದ್ದರೆ ವಾಸ್ತವ ಅಂಶಗಳನ್ನು ದಾಖಲೆಗಳಲ್ಲಿ ನಮೂದಿಸಿ ಷರಾ ಬರೆದು ದೃಢೀಕರಿಸಬೇಕು. ಈ ಕಾರ್ಯವು ಕರಾರುವಕ್ಕಾಗಿ ನಿಯಮಾವಳಿ ರೀತಿ ಆಗಬೇಕು. ತಾಲ್ಲೂಕು, ಗ್ರಾಮವಾರು, ಸರ್ವೆ ನಂಬರ್‌ವಾರು ಬಾಕಿ ಸಮೀಕ್ಷೆ ಮತ್ತು ಸರ್ವೆ ಆಗಬೇಕು. ಸಮೀಕ್ಷೆ ಆಗಿರುವುದಕ್ಕೆ ಜಿ.ಪಿ.ಆರ್.ಎಸ್ ಮಾಡಿ ದಾಖಲೆಗಳನ್ನು ಮೇಲಧಿಕಾರಿಗಳಿಗೆ ಸಲ್ಲಿಸಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪಿ .ಎನ್ ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟಾಲಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್ ಆಶ್ವಿನ್, ತಹಶೀಲ್ದಾರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!