Chikkaballapur : ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮಾರ್ಚ್ 1ರಂದು ರಾಜ್ಯದಾದ್ಯಂತ ರಾಜ್ಯ ಸರ್ಕಾರಿ ನೌಕರರ ಸಂಘಟನೆ ಮುಷ್ಕರಕ್ಕೆ (Government Employees Strike) ಕರೆ ನೀಡಿದ್ದ ಹಿನ್ನೆಲೆಯಲ್ಲಿ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯವಾಗಬಹುದು ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ (Deputy Commissioner) ಎನ್.ಎಂ. ನಾಗರಾಜ್ ನಗರದ ಜಿಲ್ಲಾಸ್ಪತ್ರೆಗೆ (District Hospital) ದಿಢೀರ್ ಭೇಟಿ (Visit) ನೀಡಿ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ಯಾವುದೇ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯವಾಗದೇ ಹೊರರೋಗಿ ವಿಭಾಗ ಸೇರಿದಂತೆ ಆಸ್ಪತ್ರೆಯ ಎಲ್ಲ ವಿಭಾಗಗಳು ಎಂದಿನಂತೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ಈ ಸಂಧರ್ಭದಲ್ಲಿ ಶಸ್ತ್ರಚಿಕಿತ್ಸಕ ರಾಜರೆಡ್ಡಿ ಸೇರಿದಂತೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.