Bagepalli : ಬಾಗೇಪಲ್ಲಿ ನಗರದ ಗೀತಾಮಂದಿರದಲ್ಲಿ ಬುಧವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (SKDRDP)ಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಚಲನಚಿತ್ರ ಕಾರ್ಯಕ್ರಮ ಉದ್ಘಾಟಿಸಿ ಬ್ಲೂಮ್ಸ್ ಕಾಲೇಜಿನ ಪ್ರಾಂಶುಪಾಲರಾದ ಉಮಾಶಶಿ ಅವರು ಮಾತನಾಡಿದರು.
ಹೆಣ್ಣು ಮನೆಕೆಲಸಗಳಿಗೆ ಮಾತ್ರ ಸೀಮಿತವಾಗಿರದೆ ಆರ್ಥಿಕವಾಗಿ ಸಬಲರಾಗಬೇಕು. ಮಹಿಳೆಯರಿಗೆ ಸಮಾಜದಲ್ಲಿ ಗೌರವ ಹಾಗೂ ಪುರುಷ ಸಮಾನ ಉದ್ಯೋಗ ಪಡೆದುಕೊಳ್ಳಬೇಕು. ಶಿಕ್ಷಣ ಕ್ರಾಂತಿಯಿಂದ ಸಮಾಜ ಪ್ರಗತಿ ಹೊಂದಲು ಸಾಧ್ಯ, ಆದ್ದರಿಂದ ಮಕ್ಕಳಿಗೆ ಅಸ್ತಿ ಸಂಪತ್ತನ್ನು ಮಾಡುವ ಬದಲು ಅವರನ್ನು ಅಕ್ಷರಸ್ಥರನ್ನಾಗಿ ಮಾಡಿದರೆ ಅವರಿಗೆ ಉಜ್ವಲ ಭವಿಷ್ಯ ಸಿಗುತ್ತದೆ ಎಂದರು.
ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಪ್ರಭಾವತಮ್ಮ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಮೇಲ್ವಿಚಾರಕಿ ಸಾರಮ್ಮ, ಜ್ಞಾನಕ ವಿಕಾಸದ ಸಮ ನ್ವಾಧಿಕಾರಿ ಮಂಜುಳ, ಒಕ್ಕೂಟದ ಅಧ್ಯಕ್ಷೆ ಮಮತ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur