Home News Chikkaballapur ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟ

ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟ

0
Chikkaballapur District Level Sports

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಶಿಕ್ಷಣ ಇಲಾಖೆ ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಹಿರಿಯ ಪ್ರಾಥಮಿಕ (Higher Primary School) ಮತ್ತು ಪ್ರೌಢಶಾಲಾ (High School) ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟ (District Level Sports) ಸಮಾರಂಭವನ್ನು ಆಯೋಜಿಸಲಾಗಿತ್ತು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ “ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾ ಮನೋಭಾವವನ್ನು ಕ್ರೀಡಾಪಟುಗಳು ಮೈಗೂಡಿಸಿಕೊಳ್ಳಬೇಕು. ಕಳೆದ ಎರಡು ವರ್ಷಗಳಿಂದ ಕೋವಿಡ್ ಸೋಂಕಿನಿಂದ ಎಲ್ಲ ರೀತಿಯ ಕ್ರೀಡಾಕೂಟಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ವರ್ಷ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಎಲ್ಲರೂ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ” ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಜಯಕುಮಾರ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಹನುಮಂತರೆಡ್ಡಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಶಶಿಧರ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎನ್.ಸಿ.ರಮೇಶ್ ಬಾಬು, ಜಿಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿರರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version