Chikkaballapur : AITUC ಯಿಂದ ಚಿಕ್ಕಬಳ್ಳಾಪುರ ನಗರದಲ್ಲಿ ಗುರುವಾರ ಆಶಾ ಕಾರ್ಯಕರ್ತೆಯರ ಜಿಲ್ಲಾ ಸಮ್ಮೇಳನವನ್ನು (District Asha Workers Conference) ನಡೆಸಲಾಯಿತು.
ಸಭೆಯಲ್ಲಿ ಆಶಾ ಕಾರ್ಯಕರ್ತೆಯರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಠ ₹ 15,000 ಪ್ರೋತ್ಸಾಹ ಧನ ನೀಡಬೇಕು. 50 ವರ್ಷ ಮೇಲ್ಪಟ್ಟವರು ಸೇವೆ ಸಲ್ಲಿಸುವ ಸಂದರ್ಭದಲ್ಲಿ ಮರಣ ಹೊಂದಿದಲ್ಲಿ ₹ 2 ಲಕ್ಷ ಪರಿಹಾರ ನೀಡಬೇಕು. ಪ್ರತಿ ವರ್ಷ ಸಂಘದ ಸಂಯೋಜನೆಯೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಸಂಪೂರ್ಣ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ಮಾಡಬೇಕು ಎಂದು ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಸಮ್ಮೇಳನದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಮಹೇಶ್ ಕುಮಾರ್, ಆಶಾ ಕಾರ್ಯಕರ್ತೆಯರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ , ಸಂಘದ ರಾಜ್ಯ ಉಪಾಧ್ಯಕ್ಷೆ ರಮಾ ಟಿ.ಸಿ, ವಿ.ಎನ್.ರಾಜಶೇಖರ್, ಹನುಮೇಶ್ ಮತ್ತಿತರರು ಪಾಲ್ಗೊಂಡಿದ್ದರು.