31.4 C
Bengaluru
Sunday, March 1, 2026

ಜಿಲ್ಲೆಯ 11 ಗ್ರಾಮಗಳ ಟ್ಯಾಂಕ್‌ ನೀರು ಕುಡಿಯಲು ಯೋಗ್ಯವಲ್ಲ : ಜಿಲ್ಲಾಧಿಕಾರಿಗಳು

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ (District Disaster Management Authority meeting) ನಡೆಸಲಾಯಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ “ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಪರೀಕ್ಷೆಯನ್ನು ನಿರಂತರ ಮಾಡಲಾಗುತ್ತಿದ್ದು ಜಿಲ್ಲೆಯ 11 ಗ್ರಾಮಗಳ ಟ್ಯಾಂಕ್‌ ನೀರು ಕುಡಿಯಲು ಯೋಗ್ಯವಲ್ಲ ಎಂದು ಪರೀಕ್ಷೆಯಿಂದ ಸಾಬೀತು ಆಗಿದೆ. ಈ ಹಿನ್ನೆಲೆಯಲ್ಲಿ ಟ್ಯಾಂಕ್‌ ಸ್ವಚ್ಛಗೊಳಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಕಾಲರಾ ರೋಗವು ಅಶುದ್ದ ನೀರಿನ ಸೇವನೆಯಿಂದ ಕಾಣಿಸಿಕೊಳ್ಳಲಿದ್ದು ಡೆಂಗಿ, ಇತರ ಕೀಟ ಜನ್ಯ ರೋಗಗಳು ಸೊಳ್ಳೆಯಿಂದ ಹರಡುವುದರಿಂದ ಜನರು ಸ್ವಚ್ಛತೆ ಆದ್ಯತೆ ನೀಡಿ ಸೊಳ್ಳೆಗಳ ಉತ್ಪತ್ತಿ ತಮ್ಮ ಮನೆಗಳ ಸುತ್ತಮುತ್ತ ತಡೆಗಟ್ಟಬೇಕು. ಚರಂಡಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಪೂರೈಕೆ ಪೈಪ್‌ಲೈನ್ ಗಳು ಒಡೆದುಹೋಗದಂತೆ ನೀಡಿಕೊಳ್ಳಬೇಕು.ಜಿಲ್ಲೆಯ 45 ಗ್ರಾಮ, 17 ವಾರ್ಡ್‌ಗಳಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇದೆ. ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂದಿನ ದಿನಗಳಲ್ಲಿ 144 ಗ್ರಾಮ ಮತ್ತು 24 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವ ಆಗಬಹುದು. ಇದನ್ನು ಗಮನದಲ್ಲಿ ಇಟ್ಟುಕೊಂಡು ನೀರಿನ ಪೂರೈಕೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು” ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!