Chikkaballapur : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (Karnataka Education Authority) ₹8.20 ಕೋಟಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಆಸ್ಪತ್ರೆ (District Hospital) ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೇಡಿಯಾಲಜಿ (Radiology) ಕಟ್ಟಡ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ (MC Sudhakar) ಬುಧವಾರ ಭೂಮಿಪೂಜೆ (Bhoomipooje)ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು “ರೇಡಿಯಾಲಜಿ ಕಟ್ಟಡದಲ್ಲಿ ಸುಸಜ್ಜಿತ ಅತ್ಯಾಧುನಿಕ ಪರೀಕ್ಷಾ ಪ್ರಯೋಗಾಲಯ, ಎಂಆರ್‌ಐ, ಸಿ.ಟಿ ಸ್ಕ್ಯಾನ್, ಎಕ್ಸ್ ರೇ, ಅಲ್ಟ್ರಾಸೌಂಡ್ ಸ್ಕಾನಿಂಗ್, ಎಕೋ, ಟಿಎಂಟಿ ಹಾಗೂ ಎಲ್ಲ ರೀತಿಯ ರಕ್ತ ಪರೀಕ್ಷೆಗಳನ್ನು ಮಾಡುವ ಸೌಲಭ್ಯ ಇರುತ್ತದೆ. ಹತ್ತು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲಾಸ್ಪತ್ರೆಗಳಿಗೆ ಬರುವ ರೋಗಿಗಳ ಸಂಖ್ಯೆ, ನಾನಾ ರೀತಿಯ ಕಾಯಿಲೆಗಳು, ಗುಣಮಟ್ಟದ ಬೋಧನೆ ಮತ್ತಿತರ ಕಾರಣಗಳಿಂದಾಗಿ ರಾಜ್ಯದಲ್ಲಿ ವಿದ್ಯಾರ್ಥಿಗಳು ವೈದ್ಯಕೀಯ ಸೀಟು ಆಯ್ಕೆ ಮಾಡಿಕೊಳ್ಳುವಾಗ ಸರ್ಕಾರಿ ಕಾಲೇಜುಗಳಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ. ಆದರೆ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಪರಿಸ್ಥಿತಿ ಇದಕ್ಕೆ ವ್ಯತಿರಿಕ್ತವಾಗಿದ್ದು ರಾಜ್ಯದಲ್ಲಿ 17 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲೂ ಅದೇ ರೀತಿ ಬೇಡಿಕೆ ಬರುವಂತೆ ಮಾಡುವ ಉದ್ದೇಶ ಸರ್ಕಾರಕ್ಕೆ ಇದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕುಮಾರ್, ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಮಂಜುನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ.ಮಂಜುಳಾದೇವಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.