Chikkaballapur : ಚಿಕ್ಕಬಳ್ಳಾಪುರ ನಗರದ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನಲ್ಲಿ ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಜಿಲ್ಲಾ ಮಟ್ಟದ ಯುವ ಸಂಸತ್ ಅಣಕು ಸ್ಪರ್ಧೆ (District Level Youth Parliament Mock Drill) ಹಮ್ಮಿಕೊಳ್ಳಲಾಗಿತು.
ಅಣಕು ಸ್ಪರ್ಧೆ ಉದ್ಘಾಟಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಮರಿಸ್ವಾಮಿ “ಪಠ್ಯೇತರ ಚಟುವಟಿಕೆಗಳ ಕ್ರೀಡೆಗಳು, ಸಾಂಸ್ಕೃತಿಕ ಸ್ಪರ್ಧೆಗಳು ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ನಾವು ಏನಾದರೂ ಗಳಿಸಲು ಸಾಧ್ಯ. ಚುನಾವಣೆಗಳಲ್ಲಿನ ಆಯ್ಕೆ ಪ್ರಕ್ರಿಯೆ ಹೇಗೆ ಎನ್ನುವ ಕುರಿತು ಅರಿವು ಮೂಡಿಸಲು ಅಣಕು ಸಂಸತ್ ನಡೆಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮೂರು ಮಕ್ಕಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಕಳುಹಿಸುತ್ತೇವೆ” ಎಂದು ಹೇಳಿದರು.
ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿ ಪ್ರಾಂಶುಪಾಲರಾದ ಅರುಳ್ ಅಮುದಾ, ಉಪನ್ಯಾಸಕರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜು, ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸತ್ಯೇಂದ್ರ, ಕಾರ್ಯದರ್ಶಿ ವ ಆದಿಶೇಷರಾವ್, ಕೃಷ್ಣಮೂರ್ತಿ, ಸರ್.ಎಂ.ವಿ ಕಾಲೇಜಿನ ಪ್ರಾಂಶುಪಾಲ ನರಸಿಂಹಪ್ಪ, ಆಕಾಶ್ ಕಾಲೇಜಿನ ಪ್ರಾಂಶುಪಾಲ ಆನಂದ್ ಉಪಸ್ಥಿತರಿದ್ದರು.