Chikkaballapur : ಚಿಕ್ಕಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಭಾರತೀಯ ರೆಡ್‌ಕ್ರಾಸ್ (Red Cross) ಸಂಸ್ಥೆ ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆಯ ವಾರ್ಷಿಕ ಸಾಮಾನ್ಯ ಸಭೆ (District Annual meeting) ನಡೆಸಲಾಯಿತು. ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಭೆ ಉದ್ಘಾಟಿಸಿ ವಾರ್ಷಿಕ ವರದಿ ಮಂಡನೆ ಹಾಗೂ ಮುಂದಿನ ವರ್ಷದ ಬಜೆಟ್‌ಗೆ ಅನುಮೋದನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಜಿಲ್ಲೆಯಲ್ಲಿ ರೆಡ್‌ಕ್ರಾಸ್ ಸಂಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅನೇಕ ಮಾನವೀಯ ಸೇವಾ ಕಾರ್ಯಗಳನ್ನು ಮಾಡುತ್ತಿದ್ದು ಇದಕ್ಕೆ ರಾಜ್ಯ ಶಾಖೆಯಿಂದ ಹಲವು ಪ್ರಶಸ್ತಿಗಳನ್ನು ಪಡೆದಿದೆ. ಕೆ.ವಿ ಶಿಕ್ಷಣ ಸಂಸ್ಥೆಯ ನವೀನ್ ಕಿರಣ್ ಅವರು 2,148 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸಿ ಯುವಕರಿಗೆ ಮಾದರಿ ಆಗಿದ್ದು ಅವರಂತೆ ಯುವಕರು ರಕ್ತದಾನ ಮಾಡಲು ಮುಂದೆ ಬರಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ಭಾರತಿಯ ರೆಡಕ್ರಾಸ್ ಸಂಸ್ಥೆ ಸಭಾಪತಿ ಕೆ.ಬಾಬು ರೆಡ್ಡಿ, ಉಪಾಧ್ಯಕ್ಷ ಕೋಡಿ ರಂಗಪ್ಪ, ಖಜಾಂಚಿ ಎಂ.ಜಯರಾಮ್, ಮಾಜಿ ಉಪಾಧ್ಯಕ್ಷ ಡಾ.ಕೆ.ಪಿ ಶ್ರೀನಿವಾಸ್ ಮೂರ್ತಿ, ಜಿಲ್ಲಾ ಕಾರ್ಯದರ್ಶಿ ಬಿ.ಎನ್ ರವಿ ಕುಮಾರ್, ಆಡಳಿತ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.