Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ (District Secretary) ಮಂಜುಳಾ ಅವರ ನೇತೃತ್ವದಲ್ಲಿ ಮಂಗಳವಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ (KDP Meeting) ನಡೆಸಲಾಯಿತು. ಸಭೆಯಲ್ಲಿ ಮುಖ್ಯವಾಗಿ ಡೆಂಗಿ, ಮಳೆ ಕೊರತೆ, ಅಂಗನವಾಡಿಗಳಿಗೆ ಕಟ್ಟಡ, ಬಿತ್ತನೆ ಕುಂಠಿತವಾಗಿರುವ ಕುರಿತು ಚರ್ಚೆಗಳು ನಡೆದವು.
ಮಳೆ ಮತ್ತು ಬಿತ್ತನೆಯ ಅಂಕಿ ಅಂಶಗಳನ್ನು ಪಡೆದು ಮಾತನಾಡಿದ ಮಂಜುಳಾ ಅವರು, “ಜಿಲ್ಲೆಯಲ್ಲಿ ಒಟ್ಟು ಮುಂಗಾರು ಅವಧಿಯಲ್ಲಿ ವಾಡಿಕೆಗಿಂತ ಉತ್ತಮವಾಗಿ ಮಳೆ ಆಗಿದೆ. ಆದರೆ ಜುಲೈನಲ್ಲಿ ವಾಡಿಕೆಗಿಂತ ಮಳೆ ಕಡಿಮೆ ಆಗಿರುವದ್ದರಿಂದ ಬಿತ್ತನೆಯೂ ಕುಂಠಿತವಾಗಿದೆ. ಜಿಲ್ಲೆಯಲ್ಲಿ ಶೇ 57ರಷ್ಟು ಮುಂಗಾರು ಬಿತ್ತನೆ ಆಗಿದೆ” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ನಿಟ್ಟಾಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.