Chikkaballapur : ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭಿವೃದ್ಧಿಗೆ ಮೀಸಲಿರುವ SCP ಮತ್ತು TSP ಹಣವನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು (BJP JDS Protest) ಗುರುವಾರ ಪ್ರತಿಭಟಿಸಿದರು.
ನಗರದ ಬಿ.ಆರ್.ಅಂಬೇಡ್ಕರ್ ಭವನದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡು ಕಾರ್ಯಕರ್ತರು ರಾಜ್ಯ ಸರ್ಕಾರ ಮತ್ತು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯ ಸರ್ಕಾರ ಮತಕ್ಕಾಗಿ ಮಾತ್ರ ಪರಿಶಿಷ್ಟರ ಬಳಕೆ ಮಾಡಿಕೊಳ್ಳುತ್ತಿದೆ. ಅವರ ಅಭಿವೃದ್ಧಿಗೆ ಯಾವುದೇ ಕ್ರಮವಹಿಸುತ್ತಿಲ್ಲ ಎಂದು ಮುಖಂಡರು ಆರೋಪಿಸಿದರು.
ಸಂಸದ ಡಾ.ಕೆ.ಸುಧಾಕರ್, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ನಾಗರಾಜ್, ದಲಿತ ಸಂಘರ್ಷ ಸಮಿತಿ ಮುಖಂಡ ಬಾಲಕುಂಟಹಳ್ಳಿ ಗಂಗಾಧರ್, ಬಿಜೆಪಿ ಮುಖಂಡರಾದ ಕೃಷ್ಣಮೂರ್ತಿ, ಕೆ.ವಿ.ನಾಗರಾಜ್, ನವೀನ್ ಕಿರಣ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮುನಿಯಪ್ಪ, ಕಾರ್ಯಾಧ್ಯಕ್ಷ ಅಜ್ಜವಾರ ಕೆ.ಆರ್.ರೆಡ್ಡಿ, ಸಿ.ಆರ್.ನರಸಿಂಹಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.