Sidlaghatta : ಪ್ರಸಕ್ತ ಸಾಲಿನ ಸೂಕ್ಷ್ಮ ನೀರಾವರಿ ಯೋಜನೆಯಡಿ ಕೃಷಿ ಬೆಳೆಗಳಲ್ಲಿ ನೀರಿನ ಸಮರ್ಥ ಬಳಕೆಯನ್ನು ಉತ್ತೇಜಿಸಲು ಕೃಷಿ ಇಲಾಖೆಯಿಂದ (Government Agriculture Department) ತುಂತುರು ಮತ್ತು ಹನಿ ನೀರಾವರಿ ಘಟಕಗಳಿಗೆ (Sprinkler & Drip Irrigation) ಶೇ 90 ರ ರಿಯಾಯಿತಿ ದರದಲ್ಲಿ (Subsidy) ವಿತರಿಸಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಕೆ.ಎಚ್.ವೀಣಾ ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಅರ್ಜಿ ಸಲ್ಲಿಸುವ ರೈತರು ಅರ್ಜಿ ನಮೂನೆಯೊಂದಿಗೆ ಫಹಣಿ, ಕೃಷಿ ಬೆಳೆ ದೃಢೀಕರಣ ಪತ್ರ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ನಿರಾಪೇಕ್ಷಣ ಪತ್ರ, 20 ರೂಗಳ ಸ್ಟಾಂಪ್ ಪೇಪರ್, ಬ್ಯಾಂಕ್ ಪಾಸ್ ಪುಸ್ತಕ, ಆಧಾರ್‌ಕಾರ್ಡ್, 4 ಪಾಸ್ ಪೋರ್ಟ್ ಸೈಜಿನ ಫೋಟೊ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಸಣ್ಣ, ಅತಿಸಣ್ಣ ರೈತರ ದೃಢೀಕರಣ ಪತ್ರ ಸಲ್ಲಿಸಲು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹಾಗು ಸಹಾಯಕ ಕೃಷಿ ನಿದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕಿ ಕೆ.ಎಚ್.ವೀಣಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur