20.4 C
Bengaluru
Sunday, March 1, 2026

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ನಗರ ಪೊಲೀಸ್ ಠಾಣೆ ವತಿಯಿಂದ ಭಾನುವಾರ ಚಿಕ್ಕಬಳ್ಳಾಪುರ ನಗರದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಅಭಿಯಾನ (Drugs Awareness Campaign) ನಡೆಸಲಾಯಿತು. ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಆರಂಭವಾದ ವಾಕಥಾನ್‌ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ಪೊಲೀಸ್ ಸಮುದಾಯದ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತಾನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ “ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆಗೆ ಕಡಿವಾಣ ಹಾಕಲು ಸಾರ್ವಜನಿಕರ ಸಹಕಾರ ಅಗತ್ಯ. ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಜನರು ಅಧಿಕವಾಗಿ ಮಾದಕ ವಸ್ತುಗಳ ವ್ಯಸನಕ್ಕೆ ಬೀಳುತ್ತಿದ್ದು ಇದರಿಂದ ಅವರ ಭವಿಷ್ಯಕ್ಕೆ ಕುತ್ತು ಎದುರಾಗುತ್ತದೆ. ಸ್ನೇಹಿತರ ಜೊತೆ ಕೂತೂಹಲಕ್ಕೆ ಸೇವಿಸುವ ಬೀಡಿ, ಸಿಗರೇಟ್ ಮತ್ತಿತರ ತಂಬಾಕು ಉತ್ಪನ್ನಗಳು ಮತ್ತು ಮಾದಕ ವಸ್ತುಗಳ ಸೇವನೆ ಮನುಷ್ಯನ ಆರೋಗ್ಯದ ಮೇಲೆ ಹಾಗೂ ಅವರ ಕುಟುಂಬದ ಮೇಲೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆ ಕಂಡು ಬಂದರೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು” ಎಂದು ಹೇಳಿದರು.

ವಾಕಥಾನ್‌ನಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಾಜ ಇಮಾಮ್ ಕಾಶಿಂ, ಚಿಕ್ಕಬಳ್ಳಾಪುರ ಡಿವೈಎಸ್‌ಪಿ ಶಿವಕುಮಾರ್, ಚಿಂತಾಮಣಿ ಡಿವೈಎಸ್‌ಪಿ ಮುರಳೀಧರ್, ನಗರ ಠಾಣೆ ಪಿಎಸ್‌ಐ ನಂಜುಂಡಯ್ಯ, ಡಿಆರ್‌ ಡಿವೈಎಸ್‌ಪಿ ಮಂಜುನಾಥ ಹಾಗೂ ‍ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!