Gudibande : ಜಿಲ್ಲಾ ಪೋಲಿಸ್ ವತಿಯಿಂದ ಗುಡಿಬಂಡೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಅಪರಾಧ ತಡೆ ಮಾಸ ಹಾಗೂ ಮಾದಕ ವಸ್ತುಗಳ ಬಗ್ಗೆ ಜಾಗೃತಿ (Drugs and Crime Prevention Awareness Jatha) ಮೂಡಿಸುವ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಬ್ ಇನ್‌ಸ್ಪೆಕ್ಟರ್ ನಾಗರಾಜ್ “ಪೊಲೀಸರೊಂದಿಗೆ ಸಾರ್ವಜನಿಕರು ಅಪರಾಧ ತಡೆ ಹಿಡಿಯುವಲ್ಲಿ ಕೈ ಜೋಡಿಸಿದಾಗ ಮಾತ್ರ ಸಮಾಜದಲ್ಲಿ ಅಪರಾಧಗಳನ್ನು ತಡೆಯಬಹುದು ಹಾಗೂ ನೆಮ್ಮದಿಯ ಜೀವನ ನಡೆಸಬಹುದು” ಎಂದು ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೆಂಕಟರಾಮು, ಬಿ.ಆರ್. ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹ್ಮದ್, ಅಫ್ಜಲ್ ಬಿಜಲಿ, ಕೃಷ್ಣಪ್ಪ, ಸುಮಲತಾ, ಡಾ.ಬಿ.ಎನ್.ಪ್ರಭಾಕರ್, ಶಿವಣ್ಣ ಮತ್ತಿತರರು ಭಾಗವಹಿಸಿದರು.