Chintamani : ದಲಿತಪರ ಸಂಘಟನೆಗಳು (DSS) ಚಿಂತಾಮಣಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಕೊಳಕು ಬಟ್ಟೆಯಿಂದ ಮುಚ್ಚಿರುವ ಅಂಬೇಡ್ಕರ್ ಪುತ್ಥಳಿಯನ್ನು ತೆರವುಗೊಳಿಸಿ, ಹೊಸದಾಗಿ ಅಂಬೇಡ್ಕರ್ ಪುತ್ಥಳಿ ಉದ್ಘಾಟಿಸಬೇಕು ಎಂದು ಒತ್ತಾಯಿಸಿ ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟಿಸಲು ಗುರುವಾರ ಚಿಂತಾಮಣಿ ನಗರದಿಂದ ಜಾಥಾದಲ್ಲಿ ಬೆಂಗಳೂರಿಗೆ ತೆರಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವು ಕಾನೂನು ವಿರೋಧಿ, ದಲಿತ ವಿರೋಧಿ, ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಶಾಲೆ ಆವರಣದಲ್ಲಿ ಕೊಳಕು ಬಟ್ಟೆ ಸುತ್ತಿ ಮುಚ್ಚಿಟ್ಟಿದ್ದ ಅಂಬೇಡ್ಕರ್ ಪುತ್ಥಳಿಯನ್ನು ತೆರವುಗೊಳಿಸಿ ಹೊಸದಾಗಿ ಉದ್ಘಾಟಿಸಬೇಕು ಎಂದು 10 ದಿನ ಧರಣಿ ಸತ್ಯಾಗ್ರಹ ಮಾಡಿದರು ಜಿಲ್ಲಾಡಳಿತ, ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಪಾದಯಾತ್ರೆಯಲ್ಲಿ ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಶಾಸಕ ಎಂ.ಕೃಷ್ಣಾರೆಡ್ಡಿ, ಮಾಜಿ ಸಚಿವ ಎನ್. ಮಹೇಶ್ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಕಾರ್ಯಕರ್ತರು ಉಪಸ್ಥಿತರಿದ್ದರು.