Chikkaballapur : ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ 2022ನೇ ಸಾಲಿನ ಏಕಲವ್ಯ ಪ್ರಶಸ್ತಿ (Ekalavya Award) ಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿಯನ್ನು (application) ಆಹ್ವಾನಿಸಲಾಗಿದ್ದು ಆಸಕ್ತ ಕ್ರೀಡಾಪಟುಗಳು ಕ್ರೀಡಾ ಇಲಾಖೆ ಜಿಲ್ಲಾ ಕಚೇರಿಯಲ್ಲಿ ಅರ್ಜಿ ಹಾಗೂ ಮಾರ್ಗಸೂಚಿ ಪಡೆದು ನವೆಂಬರ್ 27ರ ಒಳಗೆ ಕ್ರೀಡಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಕರ್ನಾಟಕ ಕ್ರೀಡಾ ರತ್ನ:
ಹಿರಿಯ ಕ್ರೀಡಾಪಟುಗಳು, ತರಬೇತುದಾರರಿಂದ ಜೀವಮಾನ ಸಾಧನೆ ಪ್ರಶಸ್ತಿಗಾಗಿ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. https://sevasindhuservices.karnataka.gov.in ಮೂಲಕ ನವೆಂಬರ್ 30ರ ಒಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ:
2023-24 ನೇ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ನವೆಂಬರ್ 27ರ ಒಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿ ಅಥವಾ 08156-270054 ಸಂಪರ್ಕಿಸಬಹುದು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur