Chikkaballapur : ಪ್ರಸಕ್ತ ವಿಧಾನಸಭೆ ಅಧಿವೇಶನದಲ್ಲಿ ಹಾಗೂ ಮುಂಬರುವ ಬಜೆಟ್ ಅಧಿವೇಶನದಲ್ಲಿ (Budget Session) ರಾಜ್ಯದ ರೈತರು ಮತ್ತು ಕೂಲಿಕಾರರನ್ನು ಬಾಧಿಸುತ್ತಿರುವ ಸಮಸ್ಯೆಗಳ (Farmers Issues) ಬಗ್ಗೆ ಚರ್ಚಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr. K. Sudhakar) ಅವರಿಗೆ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕವು ಸಚಿವರ ಕಚೇರಿಯಲ್ಲಿ ಮನವಿ ಮಾಡಿದೆ.
ಕಾರ್ಪೊರೇಟ್ ಕಂಪನಿಗಳ ಪರವಾದ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಸರ್ಕಾರಿ ಹಾಗೂ ಅರಣ್ಯ ಭೂಮಿಗೆ ಹಕ್ಕುಪತ್ರ ನೀಡಬೇಕು.ರೈತರು, ಕೂಲಿಕಾರರು ಮತ್ತು ಮಹಿಳೆಯರ ಸಾಲ ಮನ್ನಾ ಮಾಡಬೇಕು. ಈ ವಿಚಾರಗಳ ಕುರಿತು ವಿಧಾನಸಭೆಯಲ್ಲಿ ಚರ್ಚಿಸಬೇಕು. ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಮನವಿ ಮಾಡಬೇಕು ಎಂದು ಸಚಿವರಿಗೆ ಪ್ರಾಂತ ರೈತ ಸಂಘದ ಮುಖಂಡರು ಕೋರಿದರು.
ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಮುಖಂಡರಾದ ವೆಂಕಟರಾಯಪ್ಪ, ಗಂಗಾದೇವಿ, ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.