Sidlaghatta : ರೈತರ ಬರಪರಿಹಾರದ ಹಣ ವಿಳಂಬ ಹಾಗೂ ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿ ತಿಂಗಳಾದರೂ ರೈತರಿಂದ ರಾಗಿ ತೆಗೆದುಕೊಳ್ಳದಿರುವುದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ (ಸಾಮೂಹಿಕ ನಾಯಕತ್ವ) ದ ಸದಸ್ಯರು ತಹಶೀಲ್ದಾರ್ ಬಿ.ಎನ್.ಸ್ವಾಮಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು,
ಮಳೆ ಬೆಳೆ ಇಲ್ಲದ ಕಾರಣ ಸರ್ಕಾರ ಬರಪೀಡಿತ ಜಿಲ್ಲೆ ಎಂದು ಘೋಷಿಸಿದೆ. ತಾತ್ಕಾಲಿಕವಾಗಿ ಪರಿಹಾರ ಧನ ವಿತರಿಸಿದ್ದು, ಅದರಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಕೆಲವಾರು ರೈತರಿಗೆ ಇನ್ನೂ ತಲುಪಿಲ್ಲ. ಬರಪರಿಹಾರದ ಹಣಕ್ಕಾಗಿ ಕಂದಾಯ ಹಾಗೂ ಕೃಷಿ ಇಲಾಖೆಗೆ ರೈತರು ಎಡತಾಕುವಂತಾಗಿದೆ. ಈ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ರಾಗಿ ಖರೀದಿ ಕೇಂದ್ರದಲ್ಲಿ ನೋಂದಣಿ ಮಾಡಿಸಿ ತಿಂಗಳಾದರೂ ಇನ್ನೂ ರೈತರಿಂದ ಖರೀದಿಸಿಲ್ಲ. ಕೇಳಿದರೆ ಇಂದು ನಾಳೆ ಎಂದು ಉಡಾಫೆ ಉತ್ತರ ನೀಡುತ್ತಿದ್ದಾರೆ. ಈ ಕೂಡಲೇ ರಾಗಿ ಖರೀದಿ ಕೇಂದ್ರವನ್ನು ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ರೈತ ಸಂಘ (ಸಾಮೂಹಿಕ ನಾಯಕತ್ವ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ನವೀನ್ ಕುಮಾರ್ ಹಾಜರಿದ್ದರು.