Chikkabalapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ರೈತರು, ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ರಸಗೊಬ್ಬರಗಳ ಅಂಗಡಿಗಳ ಮಾಲೀಕರ (Fertilizers shop owners Meeting) ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಮುಂಗಾರು ಹಂಗಾಮು ಪ್ರಾರಂಭವಾಗಿ ಮಳೆ ಉತ್ತಮವಾಗಿದೆ. ರೈತರಲ್ಲಿ ಮಂದಹಾಸ ಮೂಡಿದೆ. ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿಗಳು ಎದುರಾಗಬಾರದು.ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಬಾರದು. ಅಂಗಡಿಗಳಲ್ಲಿ ದರಪಟ್ಟಿಯನ್ನು ಪ್ರಕಟಿಸಬೇಕು. ಕಳೆದ ವರ್ಷ ಮಳೆ ಕೊರತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬರ ಆವರಿಸಿತ್ತು. ಬೆಳೆಗಳು ಸಹ ಉತ್ತಮವಾಗಿ ಇರಲಿಲ್ಲ. ಈ ಬಾರಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯ ನಿರೀಕ್ಷೆ ಇದೆ”ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ನಿಟ್ಟಾಲಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಾವಿದ ಖಾನ್, ರೈತ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಉಪಾಧ್ಯಕ್ಷ ವೀರಾಪುರ ಮುನಿನಂಜಪ್ಪ, ತಾದೂರು ಮಂಜುನಾಥ್, ನೆಲಮಾಕನಹಳ್ಳಿ ಗೋಪಾಲ್, ಮಹೇಶ್, ಕೊಳವನಹಳ್ಳಿ ಅಶ್ವತಪ್ಪ, ಜಾತವಾರ ಹೊಸಹಳ್ಳಿ ನಾಗರಾಜು, ನಾರಾಯಣಸ್ವಾಮಿ, ಬೀರಪ್ಪ, ಶ್ರೀರಾಮ, ಆಂಜನೇಯ ರೆಡ್ಡಿ ಹಾಗೂ ಇತರರು ಪಾಲ್ಗೊಂಡಿದ್ದರು.