Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಭಾರಿ ಮಳೆ ಸುರಿಯುತ್ತಿರುವುದರಿಂದ ಚಿಕ್ಕಬಳ್ಳಾಪುರ ನಗರದ K.V. Campus ಬಳಿಯ ಹೂವಿನ ತಾತ್ಕಾಲಿಕ ಮಾರುಕಟ್ಟೆ ಸಂಪೂರ್ಣ ಕೆಸರು ಮಯವಾಗಿದೆ. ಆದ್ದರಿಂದ ಹೂವಿನ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ ಎಂದು ಹೂವಿನ ವ್ಯಾಪಾರಿಗಳು ಮತ್ತು ವರ್ತಕರು ಶನಿವಾರ ಬೆಳಗ್ಗೆ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕಳೆದೆರಡು ವರ್ಷಗಳಿಂದ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಸಮಸ್ಯೆಗಳು ಹೆಚ್ಚಿದ್ದರೂ ವಹಿವಾಟು ನಡೆಸುತ್ತಿದ್ದೇವೆ. ಈ ಕುರಿತು ಎಪಿಎಂಸಿ ಅಧ್ಯಕ್ಷರಿಗೆ, ಜಿಲ್ಲಾಧಿಕಾರಿ ಅವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಆದ್ದರಿಂದ ಹೊಸ ಮಾರುಕಟ್ಟೆಯನ್ನು ನಿರ್ಮಿಸಿಕೊಡುವವರೆಗೂ ಎಪಿಎಂಸಿಯಲ್ಲಿ ವಹಿವಾಟು ನಡೆಸಲು ಅವಕಾಶ ನೀಡಬೇಕೆಂದು ಹೂ ವ್ಯಾಪಾರಿಗಳ ಸಂಘದ ಅಧ್ಯಕ್ಷ ರವೀಂದ್ರ ಹೇಳಿದರು.
ಪ್ತ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವ ಸುಧಾಕರ್ ತಾತ್ಕಾಲಿಕ ಮಾರುಕಟ್ಟೆಯಲ್ಲಿ ಹೆಚ್ಚು ಅವ್ಯವಸ್ಥೆಯಿದ್ದು, ಎಪಿಎಂಸಿ ಕಾರ್ಯದರ್ಶಿ ಇದನ್ನು ಗಮನಿಸಿ ಪರಿಹಾರ ನೀಡುವಲ್ಲಿ ಅಧಿಕಾರ ಲೋಪ ಕಾಣುತ್ತಿದೆ, ಕೂಡಲೇ ಮಾರುಕಟ್ಟೆಯನ್ನು ಸರಿಪಡಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿಯೇ ಹೆಚ್ಚು ಹೂ ಬೆಳೆಗಾರರು ಚಿಕ್ಕಬಳ್ಳಾಪುರದಲ್ಲಿ ಇದ್ದಾರೆ, ಜಾಗ ಕಡಿಮೆಯಿರುವುದರಿಂದ ಎಪಿಎಂಸಿಯಲ್ಲಿ ಹೂ ವಹಿವಾಟು ನಡೆಸಲು ಅವಕಾಶವಿಲ್ಲ. ಸೋಮವಾರ (ನ.15) ರೈತರು, ಅಧಿಕಾರಿಗಳು, ವ್ಯಾಪಾರಿಗಳನ್ನು ಒಳಗೊಂಡ ಸಭೆ ನಡೆಸಿ ನಗರದ ಹೊರವಲಯದಲ್ಲಿ ಹೂ ಮಾರುಕಟ್ಟೆ ನಿರ್ಮಾಣದ ಬಗ್ಗೆ ಚರ್ಚಿಸಲಾಗುವುದು. ಜಿಲ್ಲಾಡಳಿತ ಗುರುತಿಸಿರುವ ಜಮೀನು ಸೂಕ್ತವಲ್ಲ ಎಂದರೆ ನೀವು ಯಾವ ಸರ್ಕಾರಿ ಜಮೀನು ತೋರಿಸುವಿರೊ ಅಲ್ಲಿ ಮಾರುಕಟ್ಟೆಯನ್ನು ನಿರ್ಮಿಸಿಕೊಡಲಾಗುವುದು ಎಂದು ಸಚಿವರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur