
Sidlaghatta : ಪೆಟ್ರೋಲ್ ಡೀಸೆಲ್ (Petrol Diesel) ಮತ್ತು ತೈಲ ಉತ್ಪನ್ನಗಳ ಬೆಲೆ ಏರಿಕೆ (Price Hike) ಖಂಡಿಸಿ ನಗರದಲ್ಲಿ ಯುವ Congress ಕಾರ್ಯಕರ್ತರು ಮತ್ತು NSUI ಕಾರ್ಯಕರ್ತರು ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಿಂದ ಖಾಲಿ ಸಿಲೆಂಡರ್ ನೊಂದಿಗೆ ಪ್ರತಿಭಟನಾ (Protest) ಮೆರವಣಿಗೆ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಚರಣ್ ರೆಡ್ಡಿ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ 2 ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವುದಾಗಿ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಉದ್ಯೋಗ ನೀಡುವುದರಲ್ಲಿ ವಿಫಲವಾಗಿದೆ. ಜೊತೆಗೆ ಇರುವ ಉದ್ಯೋಗಗಳು ಸಹ ಕಿತ್ತುಕೊಳ್ಳುವ ಮಟ್ಟಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಅಗತ್ಯವಸ್ತುಗಳ ಬೆಲೆ ದಿನೇ ದಿನೇ ಗಗನಕ್ಕೇರುತ್ತಿದೆ. ಇದರಿಂದ ಬಡವರ ಜೀವನ ದುಸ್ತರವಾಗಿದ್ದು, ಅಡುಗೆ ಅನಿಲದ ಬೆಲೆ ಸಾವಿರದ ಗಡಿ ದಾಟಿರುವುದು ಬಿಜೆಪಿ ಸರ್ಕಾರದ ಸಾಧನೆ ಎಂದು ಲೇವಡಿ ಮಾಡಿದರು.
ದೇಶದ ಜನರಿಗೆ ಒಳ್ಳೆಯ ದಿನಗಳನ್ನು ತೋರಿಸುವುದಾಗಿ ಹೇಳಿದ ಬಿಜೆಪಿ ನಾಯಕರು ಜನರ ಭಾವನೆಗಳಿಗೆ ಧಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪದವಿಗಳನ್ನು ಪೂರ್ಣಗೊಳಿಸಿರುವ ನಿರುದ್ಯೋಗಿಗಳಿಗೆ ಉದ್ಯೋಗ ಇಲ್ಲದಂತಾಗಿದೆ. ಜನಸಾಮಾನ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಬೀದಿಗಳಿದು ಹೋರಾಟ ನಡೆಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಭಕ್ತರಹಳ್ಳಿ ಚಿದಾನಂದಮೂರ್ತಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಾರ್ತಿಕ್, ಚಿಲಕಲನರ್ಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನೀರ್, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಸುನಿಲ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಶಮಂತ್, ಅಧ್ಯಕ್ಷ ಅರವಿಂದ್, ಪ್ರಸನ್ನ, ಪವನ್, ಕಲ್ಯಾಣ್, ಮೊಹಮ್ಮದ್ ಹಫೀಸ್, ಗಾಯತ್ರಿ ಆಫ್ರಿದ್, ಸೈಯದ್ ಬಾಬಾ, ಮುಸ್ತು ಹಾಜರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur