Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಬುಧವಾರ ಗಾಂಧಿ ಜಯಂತಿ (Gandhi Jayanthi) ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ (Lal Bahadur Shastri) ಜಯಂತಿ ಯನ್ನು ಸರಳವಾಗಿ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಶ್ರಯದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದಲ್ಲಿ ನಿರ್ಮಾಣವಾಗಿರುವ ಗಾಂಧಿ ಭವನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಲೋಕಾರ್ಪಣೆ ಮಾಡಿದರು.
ಚಿಂತಾಮಣಿ :

ಚಿಂತಾಮಣಿ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸ್ವಚ್ಛತಾ ಕಾರ್ಯಕ್ರಮದ ಮೂಲಕ ಗಾಂಧೀಜಿಗೆ ನಮನ ಸಲ್ಲಿಸಲಾಯಿತು.
ಚೇಳೂರು:

ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಬುಧವಾರ ಚೇಳೂರು ಪಟ್ಟಣದ ವಿವಿಧ ಶಾಲಾ-ಕಾಲೇಜು, ಕಚೇರಿ ಮತ್ತು ಸಂಘ ಸಂಸ್ಥೆಗಳು ಆಚರಿಸಿದವು.
ಗೌರಿಬಿದನೂರು :

ಗೌರಿಬಿದನೂರು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿರುವ ಗಾಂಧಿ ಭಾವಚಿತ್ರಕ್ಕೆ ಮಾಜಿ ಶಾಸಕ ಎನ್.ಎಚ್ ಶಿವಶಂಕರ ರೆಡ್ಡಿ ಮಾಲಾರ್ಪಣೆ ಮಾಡಿ ಗಾಂಧಿ ಜಯಂತಿ ಆಚರಿಸಿದರು.
ಶಿಡ್ಲಘಟ್ಟ :

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ, ಸ್ತ್ರೀಶಕ್ತಿ ಭವನದ ಹಿಂಭಾಗದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.