Friday, March 29, 2024
HomeChikkaballapurಜಿಲ್ಲೆಯಾದ್ಯಂತ ರಾಷ್ಟ್ರಪಿತ ಬಾಪುವಿನ ಸ್ಮರಣೆ

ಜಿಲ್ಲೆಯಾದ್ಯಂತ ರಾಷ್ಟ್ರಪಿತ ಬಾಪುವಿನ ಸ್ಮರಣೆ

- Advertisement -
- Advertisement -
- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ (Mahatma Gandhi) ಮತ್ತು ಲಾಲ್‌ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳಲಾಗಿತ್ತು. ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತಾ ಶ್ರಮದಾನದಲ್ಲಿ ಭಾಗವಹಿಸಿ ಸ್ವಚ್ಛತಾ ಅಭಿಯಾನ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ “ದೇಶದ ಸ್ವಾತಂತ್ರ್ಯ ಮತ್ತು ಸಾಮಾಜಿಕ ಬದಲಾವಣೆಗಾಗಿ ಪ್ರಾಮಾಣಿಕವಾಗಿ ದುಡಿದ ಮಹಾನ್ ಚೇತನ ಮಹಾತ್ಮ ಗಾಂಧೀಜಿ, ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಅವಿರತ ಹೋರಾಡಿ ಇಡೀ ಜೀವನವನ್ನೇ ಮುಡುಪಾಗಿಟ್ಟಿದ್ದರು. ಸರಳತೆ, ಸಜ್ಜನಿಕೆ, ಸತ್ಯ ಮತ್ತು ಪ್ರಾಮಾಣಿಕತೆಗಳ ಸಾಕಾರ ಮೂರ್ತಿಯಾಗಿದ್ದ ಗಾಂಧೀಜಿಯವರು ಅಸ್ಪೃಶ್ಯತೆ ನಿವಾರಣೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನಗಳನ್ನು ಮಾಡಿದರು” ಎಂದು ಹೇಳಿದರು.

ರೈಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ರೈಲು ಅಪಘಾತ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿ ಜವಾಬ್ದಾರಿಯುತವಾಗಿ ನಡೆದುಕೊಂಡ ಮೇರು ವ್ಯಕ್ತಿತ್ವ ಲಾಲ್ ಬಹದ್ದೂರ್ ಶಾಸ್ತ್ರೀಯವರದ್ದು. ದೇಶದ ಪ್ರಧಾನಿ ಹುದ್ದೆಯಂತಹ ಅತ್ಯಂತ ಉನ್ನತ ಹುದ್ದೆಯನ್ನು ಹೊಂದಿದ್ದರೂ ಸದಾ ದೇಶಕ್ಕಾಗಿ ಮಿಡಿದ ಅವರು ದೇಶದ ರೈತ ಮತ್ತು ಸೈನಿಕರ ಪರವಾಗಿ ಅಪಾರ ತುಡಿತ ಹೊಂದಿ ಅವರ ಘನತೆಯನ್ನು ಹೆಚ್ಚಿಸಲು ಮತ್ತು ಎತ್ತಿಹಿಡಿಯಲು ಹಗಲಿರುಳು ಶ್ರಮಿಸಿದರು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಉಪ ವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Chikkaballapur Gandi Jayanthi At Municipal Office

ಭಾನುವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ (Ghandhi Jayanthi) ಯನ್ನು ಚಿಕ್ಕಬಳ್ಳಾಪುರ ನಗರಸಭೆ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಶಿಡ್ಲಘಟ್ಟ

Sidlaghatta Cheemangala Gandhi Jayanti

ಶಿಡ್ಲಘಟ್ಟ (Sidlaghatta) ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸ್ವಚ್ಛತಾ ಹಿ ಸೇವಾ ಅಭಿಯಾನದ ಜಾಗೃತಿ ಮೂಡಿಸುವ ಸಲುವಾಗಿ ಶ್ರಮದಾನ ಮಾಡಲಾಯಿತು. ನಂತರ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆಯ ಶೌಚಾಲಯವನ್ನು ಉದ್ಘಾಟಿಸಲಾಯಿತು ಹಾಗೂ ಹೋಬಳಿಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿಜೇತರಾದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಬಾಗೇಪಲ್ಲಿ

Bagepalli Gandhi Jayanthi

ಬಾಗೇಪಲ್ಲಿ (Bagepalli) ತಹಶೀಲ್ದಾರ್ ವೈ.ರವಿ ಅಧ್ಯಕ್ಷತೆಯಲ್ಲಿ ಭಾನುವಾರ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ತಾಲ್ಲೂಕು ಆಡಳಿತದಿಂದ ಕಚೇರಿ ಆವರಣದಲ್ಲಿ ಸರ್ವಧರ್ಮ ಸಮನ್ವಯ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!