21.2 C
Bengaluru
Thursday, December 12, 2024

ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರ ಮತ್ತು ತಾಲ್ಲೂಕಿನಾದ್ಯಂತ ಈ ಬಾರಿ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘ ಸಂಸ್ಥೆಗಳು ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆಯುವ ಜೊತೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸರ್ಕಲ್ ಇನ್ಸ್ ಪೆಕ್ಟರ್ ನಂದಕುಮಾರ್ ಹೇಳಿದರು.

ಶಿಡ್ಲಘಟ್ಟ ನಗರ ಪೊಲೀಸ್‌ಠಾಣೆ ಆವರಣದಲ್ಲಿ ಶನಿವಾರ ಗಣೇಶೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಈ ಬಾರಿ ಗಣೇಶ ಪ್ರತಿಷ್ಠಾಪನೆ ಬಗ್ಗೆ ಸರ್ಕಾರ ಹಲವು ಮಾರ್ಗಸೂಚಿಗಳು ಹೊರಡಿಸಿರುವ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಸರ್ಕಾರದ ಸಲಹೆ, ಸೂಚನೆಗಳನ್ನು ಪಾಲಿಸಬೇಕು. ಸಾರ್ವಜನಿಕ ಸಂಘ ಸಂಸ್ಥೆಗಳು ಕಡ್ಡಾಯವಾಗಿ ನಗರಸಭೆ, ಗ್ರಾಮಪಂಚಾಯಿತಿ, ಬೆಸ್ಕಾಂ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದ ನಂತರವಷ್ಟೇ ಗಣೇಶ ಪ್ರತಿಷ್ಠಾಪಿಸಬೇಕು. ಅನುಮತಿಯಿಲ್ಲದೇ ಪ್ರತಿಷ್ಠಾಪಿಸಿದರೆ ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಲಾಗುವುದು. ಇನ್ನು ಪ್ರತಿಷ್ಠಾಪನಾ ಸ್ಥಳ ಸೇರಿದಂತೆ, ಮೆರವಣಿಗೆ ಹಾಗೂ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಈ ಬಾರಿ ಡಿಜೆ ಬಳಸುವಂತಿಲ್ಲ. ಪ್ರತಿಯೊಬ್ಬರೂ ಸರ್ಕಾರ ಹಾಗು ಸಂಬಂಧಪಟ್ಟ ಇಲಾಖೆಗಳು ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಇಲ್ಲವಾದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗಳನ್ನು ಮಾಡಬೇಕು. ಪ್ರತಿಷ್ಠಾಪನೆಗೂ ಮುನ್ನ ಸ್ಥಳ ಮಾಲೀಕರ ಅನುಮತಿ ಪತ್ರ ಕಡ್ಡಾಯ. ಸಂಘಟಕರು ತಾವು ಪ್ರತಿಷ್ಠಾಪಿಸಿರುವ ಮೂರ್ತಿಗಳ ಸುರಕ್ಷತೆ ಹಾಗೂ ಪ್ರತಿಷ್ಠಾಪನಾ ಸ್ಥಳದಲ್ಲಿ ನಡೆಯುವ ಯಾವುದೇ ಅಹಿತಕರ ಘಟನೆಗೆ ತಾವೇ ಜವಾಬ್ದಾರರಾಗುರುತ್ತೀರಿ ಎನ್ನುವುದನ್ನು ಅರಿತು ಗಣೇಶೋತ್ಸವ ಆಚರಣೆ ಮಾಡಬೇಕು ಎಂದರು.

ಸರ್ಕಲ್ ಇನ್ಸ್ ಪೆಕ್ಟರ್ ನಂದಕುಮಾರ್, ಗ್ರಾಮಾಂತರ ಠಾಣೆ ಪಿಎಸ್ಸೈ ಸುನಿಲ್, ಟೌನ್ ಪಿಎಸ್ಸೈ ವೇಣುಗೋಪಾಲ್, ಅಪರಾಧ ವಿಭಾಗದ ಪಿಎಸ್ಸೈ ಪದ್ಮಾವತಮ್ಮ, ದಿಬ್ಬೂರಹಳ್ಳಿ ಪಿಎಸ್ಸೈ ರಾಜೇಶ್ವರಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಯಲ್ಲಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!