Gauribidanur : ಗೌರಿಬಿದನೂರು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸೋಮವಾರ ಕಾರ್ಮಿಕ ಇಲಾಖೆ ವತಿಯಿಂದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿರ್ಮೂಲನೆ ಮಾಡಲು ತಾಲ್ಲೂಕು ಮಟ್ಟದ ಕಾರ್ಯಪಡೆ ಸಭೆಯನ್ನು (Abolition of Child Labor Task Force Meeting) ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಮಹೇಶ್.ಪತ್ರಿ “ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಕೆಲಸಗಳಲ್ಲಿ ನೇಮಿಸಿಕೊಳ್ಳುವುದು ಅಪರಾಧ. ಮಕ್ಕಳು ಶಿಕ್ಷಣ ಪಡೆಯುವುದು ಅವರ ಹಕ್ಕು. ಯಾರಾದರೂ ಕೆಲಸಕ್ಕೆ ನೇಮಿಸಿಕೊಂಡಿರುವುದು ಕಂಡು ಬಂದರೆ ಅಂತಹವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಕಾರ್ಮಿಕ ನಿರೀಕ್ಷಕ ಟಿ.ಬಿ ಸತೀಶ್, ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ರಮೇಶ್, ಕೃಷಿ ಸಹಾಯಕ ನಿರ್ದೇಶಕ ಮೋಹನ್, ಡಾ.ಹೇಮಲತಾ, ಪಿಎಸ್ಐ ಚಂದ್ರಕಲಾ, ಸಿಡಿಪಿಒ ರವಿಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.