Gauribidanur : ಗೌರಿಬಿದನೂರು ನಗರದ ಬೈಪಾಸ್‌ನ ವಿನಾಯಕ ಗೆಳೆಯರ ಬಳಗದ ವತಿಯಿಂದ 20ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿದ್ದ ಮಹಾಗಜ ಸಿಂಹಾಸನ ಗಣಪತಿಯ ವಿಸರ್ಜನಾ (Ganesha Visarjan) ಮೆರವಣಿಗೆಯು ಭಾನುವಾರ ನಗರದಲ್ಲಿ ಅದ್ದೂರಿಯಾಗಿ ನಡೆಯಿತು.
ವಿವಿಧ ಕಲಾ ತಂಡಗಳೊಂದಿಗೆ ಬೈಪಾಸ್‌ನಿಂದ ಪ್ರಾರಂಭವಾದ ಮೆರವಣಿಗೆ ಎಂ.ಜಿ ವೃತ್ತ, ಅಂಬೇಡ್ಕರ್ ವೃತ್ತ, ಎನ್.ಸಿ. ನಾಗಯ್ಯರೆಡ್ಡಿ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ನ್ಯಾಷನಲ್ ಕಾಲೇಜು ಮುಂಭಾಗದ ರಸ್ತೆಯಲ್ಲಿ ಸಾಗಿತು.
ಸಿಪಿಐ ಕೆ.ಪಿ.ಸತ್ಯನಾರಾಯಣ ನೇತೃತ್ವದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿದ್ದ ಮೆರವಣಿಗೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು, ಭಕ್ತರು ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು.