Gauribidanur : ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 2023ನೇ ಸಾಲಿನ ಬೆಳೆ ನಷ್ಟ ಪರಿಹಾರ (crop loss compensation) ಸರಿಯಾಗಿ ವಿತರಣೆ ಆಗುತ್ತಿಲ್ಲ ಎಂದು ದೂರಿ ಮಂಗಳವಾರ ಗೌರಿಬಿದನೂರು ತಾಲ್ಲೂಕಿನ ಇಡಗೂರು ರೈತರು ಪಂಚಾಯಿತಿ ಕಾರ್ಯಾಲಯದ ಮುಂದೆ ಧರಣಿ (farmer Protest) ನಡೆಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ “ನಮ್ಮ ಪಂಚಾಯಿತಿಯಲ್ಲಿ ಪಿಡಿಒ ಸರಿಯಾದ ಸರ್ವೇ ಮಾಡದೇ, ಬೆಳೆ ಬಾರದಿದ್ದರೂ ಬಂದಿದೆ ಎಂದು ಸುಳ್ಳು ವರದಿಯನ್ನು ಸರ್ಕಾರಕ್ಕೆ ನೀಡಿ ರೈತರಿಗೆ ವಂಚಿಸಿದ್ದಾರೆ. ಆದ್ದರಿಂದ ಸತ್ಯಾಂಶವನ್ನು ತಿಳಿದು ನಮಗೆ ನಿಜವಾದ ಬೆಳೆ ನಷ್ಟ ಪರಿಹಾರ ನೀಡಬೇಕೆಂದು” ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಂದು ನಮ್ಮ ಸಮಸ್ಯೆಯನ್ನು ಪರಿಹರಿಸುವ ತನಕ ನಾವು ಧರಣಿಯನ್ನು ಮುಂದುವರಿಸುತ್ತೇವೆ ಎಂದು ಪ್ರತಿಭಟನನಿರತ ರೈತರು ತಿಳಿಸಿದರು.