Gauribidanur : ಗೌರಿಬಿದನೂರು ತಾಲ್ಲೂಕಿನ ಹೊಸೂರು ಬಳಿಯ ಡಾ.ಎಚ್.ನರಸಿಂಹಯ್ಯ ಉಪ- ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ (Dr H Narasimhaiah sub regional Science Center) ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಸೋಮವಾರ ಡಾ.ಎಚ್.ನರಸಿಂಹಯ್ಯ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಡಿಟೋರಿಯಂ, ಕಿರು ತಾರಾಲಯ ಹಾಗೂ ಗ್ಯಾಲರಿಗಳನ್ನು ಉದ್ಘಾಟಿಸಲಾಯಿತು.
ಅಂತರಾಷ್ಟ್ರೀಯ ವಿಜ್ಞಾನ ಕೇಂದ್ರದ ಶಂಕುಸ್ಥಾಪನೆಯನ್ನುಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಟಿ.ಬಿ ನಾಗರಾಜು ಉದ್ಘಾಟಿಸಿದರು. ಇಸ್ರೋ ಸಂಸ್ಥೆಯ ಅಧ್ಯಕ್ಷರಾದ ಡಾ.ಎಸ್.ಸೋಮನಾಥ ಅವರು ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಬಾಹ್ಯಕಾಶ, ಉಪಗ್ರಹ, ರಾಕೇಟ್ ಉಡಾವಣೆ ಹಾಗೂ ವಿಜ್ಞಾನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಮಕ್ಕಳಿಗೆ ತಿಳಿಸಿದರು.

ಶಾಸಕ ಎನ್.ಎಚ್.ಶಿವಶಂಕರರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ತಹಶೀಲ್ದಾರ್ ಎಚ್.ಶ್ರೀನಿವಾಸ್, ಭಾರತೀಯ ವಿಜ್ಞಾನ ಸಂಸ್ಥೆಯ ನಿವೃತ್ತ ಪ್ರೊಫೆಸರ್ ಕೆ.ಜಿ.ಪಿ.ರೆಡ್ಡಿ, ನಿವೃತ್ತ ನ್ಯಾಯಾಧೀಶರಾದ ಎನ್.ಕುಮಾರ್, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ.ಇ.ವಿ.ರಮಣರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur